Breaking News

ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಕೇಸ್: ಕಾನೂನು ಪ್ರಕಾರ ಕಠಿಣ ಶಿಕ್ಷೆ- ಸಿಎಂ ಸಿದ್ದರಾಮಯ್ಯ

Spread the love

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವೃತ್ತದಲ್ಲಿ 18 ವರ್ಷಗಳಿಂದ ಇದ್ದ ಗಾಂಧಿ ಪ್ರತಿಮೆಯನ್ನು ನಿನ್ನೆ (ಸೋಮವಾರ) ತಡರಾತ್ರಿ 2 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.

ಈ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ದುಷ್ಕೃತ್ಯ ಎಸಗಿದವರನ್ನು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಪೊಲೀಸ್ ವರಿಷ್ಟಧಿಕಾರಿ‌ ಮಿಥುನ್ ಕುಮಾರ್ ಜಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತಡೆದು ವೃತ್ತದ ಬಳಿ ಗಾಂಧಿ ಫೋಟೋ ಇಟ್ಟು ಪ್ರತಿಭಟಿಸಿದ ಜನರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

“ರಾಷ್ಟಪಿತ ಮಹಾತ್ಮ ಗಾಂಧಿಜೀ ಪ್ರತಿಮೆ ಧ್ವಂಸ ಮಾಡಿರುವುದನ್ನು ಖಂಡಿಸುತ್ತೇನೆ. ನಮ್ಮ ದೇಶದ ಅಪ್ರತಿಮ ಹೋರಾಟಗಾರರು ಹಾಗೂ ಅಹಿಂಸಾವಾದಿಗಳ ಪ್ರತಿಮೆಯನ್ನು ಧ್ವಂಸ ಮಾಡಿದ್ದು ಖಂಡನೀಯ. ಜಿಲ್ಲಾಧಿಕಾರಿಗಳ ಜೊತೆ ಬೇರೆ ಮೂರ್ತಿ ನಿರ್ಮಾಣದ ಬಗ್ಗೆ ಮಾತನಾಡುತ್ತೇನೆ” ಎಂದು ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ. ಇದೇ ವೇಳೆ ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದರು.

ಹೊಳೆಹೊನ್ನೂರು ಪಟ್ಟಣಕ್ಕೆ ಪೊಲೀಸ್ ವರಿಷ್ಟಧಿಕಾರಿ‌ ಮಿಥುನ್ ಕುಮಾರ್ ಜಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಭೇಟಿ ಮಾಡಿ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದಾರೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವುದಾಗಿ ಭರವಸೆ ನೀಡಿದ ನಂತರ ಜನರು ಪ್ರತಿಭಟನೆ ಹಿಂಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ