Breaking News

ರಾಜ್ಯದ 27 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಈ ಸಂಬಂಧ ಸಮಸ್ಯೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿದೆ.

Spread the love

ಬೆಂಗಳೂರು : ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬರ ಘೋಷಣೆಗೆ ಮುನ್ನ ಕೇಂದ್ರದ ಮಾನದಂಡದಂತೆ ಮಾಸಾಂತ್ಯದೊಳಗೆ ಬೆಳೆ ಸಮೀಕ್ಷೆ ನಡೆಸಿ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ವಿಧಾನಸೌಧದಲ್ಲಿ ಇಂದು ಪ್ರಕೃತಿ ವಿಕೋಪದಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

27 ಜಿಲ್ಲೆಗಳಲ್ಲಿ ಮಳೆ ಕೊರತೆ : ರಾಜ್ಯದ 27 ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಮುಂದಿನ ಒಂದೆರೆಡು ದಿನ ಹೀಗೆ ಪರಿಸ್ಥಿತಿ ಮುಂದುವರೆದರೆ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಅದನ್ನು ನಿಭಾಯಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸುಮಾರು 170 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಇದೆ. ಬೆಳೆ ಒಣಗುತ್ತಿವೆ. ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. 2016 ಹಾಗೂ 2020ರ ಮಾರ್ಗಸೂಚಿ ಅನ್ವಯ ಬರ ಘೋಷಣೆಗೆ ಮೊದಲು ಕೆಲವೊಂದು ಮಾನದಂಡಗಳನ್ನು ಪರಿಗಣಿಸಲೇಬೇಕಾಗಿದೆ. ಹಾಗಾಗಿ ನಾಳೆಯಿಂದಲೇ ಈ ಎಲ್ಲಾ ಜಿಲ್ಲೆಗಳ 121 ತಾಲ್ಲೂಕುಗಳಲ್ಲಿ (ಗ್ರೌಂಡ್ ಟ್ರುಥ್ /ವೆರಿಫಿಕೇಷನ್ ಗಾಗಿ) ಬೆಳೆ ಸಮೀಕ್ಷೆ ‌ನಡೆಸಿ ಜಿಲ್ಲಾಧಿಕಾರಿ ಮೂಲಕ ವರದಿ ಪಡೆಯಲಾಗುವುದು ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಹವಾಮಾನ ವರದಿ, ಮಳೆ ಕೊರತೆ, ಬೆಳೆ ಪರಿಸ್ಥಿತಿ, ಮೇವಿನ ಲಭ್ಯತೆ, ಜಲಾಶಯದ ನೀರಿನ‌ ಸಂಗ್ರಹ, ಕುಡಿಯುವ ನೀರಿನ‌ ಪರಿಸ್ಥಿತಿ ಕುರಿತು ವಾಸ್ತವ ಅಂಶಗಳು ಹಾಗೂ‌ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಜಿಲ್ಲಾಧಿಕಾರಿಯವರ ವರದಿ ಬಂದ ನಂತರ ಮತ್ತೆ ಉಪ‌ಸಮಿತಿ ಸಭೆ ನಡೆಸಿ‌ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ