ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. 
ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು. ಕೆಲವೆಡೆ ಸರಿಯಾದ ವ್ಯವಸ್ಥೆ ಇಲ್ಲ ಎಂಬ ಆರೋಪ ಬಂದಿದೆ. ಅಂತ ಆರೋಪ ಮತ್ತೆ ಬರಕೂಡದು. ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ದೂರು ಬಂದರೆ ಸುಮ್ಮನಿರಲ್ಲ ಎಂದು ಸಚಿವ ನಾರಾಯಣ ಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 
ಮಂಡ್ಯ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಕ್ರಮವಹಿಸಲು ಮೊನ್ನೆ ವಿಡಿಯೊ ಕಾನ್ಫರೆನ್ಸ್ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ನಿನ್ನೆ ಆದಿಚುಂಚನಗಿರಿ ಶ್ರೀಗಳ ಸಾನ್ನಿಧ್ಯದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿದ್ದರು. ಇಂದು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7