Breaking News

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಗೃಹ ಸಚಿವ ಜಿ.ಪರಮೇಶ್ವರ್

Spread the love

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೆ ರಕ್ಷಣೆ ಕೊಟ್ಟಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಮಾಡುತ್ತೇವೆ. ಹಿರಿಯ ಅಧಿಕಾರಿಗಳೇ ಈ ಬಗ್ಗೆ ತನಿಖೆ ನಡೆಸುತ್ತಾರೆ. ಸಾಹಿತಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ ಒಂದು ವರ್ಗದ ಜನ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. ಸೈದ್ಧಾಂತಿಕ ವ್ಯತ್ಯಾಸಗಳಿಂದಾಗಿಯೇ ಗೌರಿ ಲಂಕೇಶ್ ಹಾಗೂ ಎಂ.ಎಂ.ಕಲ್ಬುರ್ಗಿ ಅವರ ಹತ್ಯೆಗಳಾಗಿದೆ ಎಂದರು.

ರಾಜ್ಯದ ಹೆಸರಾಂತ ಸಾಹಿತಿಗಳಲ್ಲಿ ಕೆಲವರು ಹಿರಿಯ ಸಾಹಿತಿಗಳು, ಮರುಳ ಸಿದ್ದಪ್ಪ ನೇತೃತ್ವದಲ್ಲಿ ನನ್ನನ್ನು ಭೇಟಿ ಮಾಡಿದ್ದಾರೆ. ಹದಿನೈದು ದಿನಗಳ ಹಿಂದೆ ಪತ್ರ ಬರೆದು ಬೆದರಿಕೆ ಪತ್ರ, ಕರೆಗಳು ಬರುತ್ತಿವೆ ಎಂಬುದನ್ನು ನನ್ನ ಗಮನಕ್ಕೆ ತಂದಿದ್ದರು. ನಮ್ಮನ್ನು ಯಾವ ರೀತಿ ರಕ್ಷಣೆ ಮಾಡ್ತೀರಿ ಎಂದು ಪ್ರಶ್ನಿಸಿದ್ದರು. ಆ ಪತ್ರವನ್ನು ಡಿಜಿಪಿಗೆ ಕಳುಹಿಸಿದ್ದೇನೆ. ಯಾರಿಗೆ ಪರ್ಸನಲ್ ಸೆಕ್ಯೂರಿಟಿ ಬೇಕೋ ಕೊಡ್ತೇವೆ. ಗನ್ ಮ್ಯಾನ್​ಗಳನ್ನು ಕೂಡ ಕೊಡ್ತೇವೆ ಅಂತಾ ಹೇಳಿದ್ದೇನೆ ಎಂದು ಹೇಳಿದರು.

ಇದೇ ವೇಳೆ ಸಾಹಿತಿ ಮರುಳು ಸಿದ್ದಪ್ಪ ಮಾತನಾಡಿ, ಬಿಜೆಪಿ ಅಪಾಯಕಾರಿ ದಾರಿ ಹಿಡಿದಿದೆ. ಅದನ್ನು ನಾವು ಟೀಕೆ ಮಾಡಿದ್ದೇವೆ. ಮುಕ್ತವಾಗಿ ಮಾತನಾಡುವುದರಿಂದ ಆತಂಕ ಆಗಿದೆ. ಅವರ ಫ್ಯಾಸಿಸ್ಟ್ ಮನೋಭಾವನೆಯನ್ನು ಖಂಡಿಸುತ್ತೇವೆ. ಅದಕ್ಕೆ ನಮ್ಮ ಬಾಯಿ ಮುಚ್ಚಿಸಲು ಮಾಡ್ತಿದ್ದಾರೆ. ಗೌರಿ ಲಂಕೇಶ್ ಹತ್ಯೆ ಯಾಕಾಯ್ತು ಅಂತಾ ಗೊತ್ತಿದೆ. ಅದೇ ಗುಂಪು ನಮ್ಮನ್ನು ಬೆದರಿಸುತ್ತಿದೆ. ಆ ಗುಂಪನ್ನು ಪತ್ತೆ ಹಚ್ಚಬೇಕು, ಇಡೀ ದೇಶಕ್ಕೆ ಗೊತ್ತಾಗಬೇಕು. ದೇಶದಲ್ಲಿ ಭಯಾನಕ ವಾತಾವರಣವನ್ನು ಹರಡಿಸುತ್ತಿದ್ದಾರೆ. ಇವರು ಅಪಾಯಕಾರಿಗಳು, ಆತಂಕ ಸೃಷ್ಟಿ ಮಾಡುತ್ತಿರುವುದನ್ನು ಬಯಲಿಗೆ ಎಳೆಯಬೇಕು ಎಂದು ಒತ್ತಾಯಿಸಿದ ಅವರು, ನಾವು ಯಾವ ಪಕ್ಷದ ಪರವೂ ಇಲ್ಲ, ವಿರುದ್ಧವೂ ಇಲ್ಲ. ಬಹುತ್ವದ ಸಂಸ್ಕೃತಿಯನ್ನು ಸಂವಿಧಾನವನ್ನು ಉಳಿಸಬೇಕು ಎಂದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ