Breaking News

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಜಗಳಧಾರವಾಡದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

Spread the love

ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಮುಂಬೈ ಮೂಲದ ಸುಶಾಂತ ಅಗರವಾಲ್‌ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್​ ಮಾಡಿರುವುದಾಗಿ ಪೊಲೀಸ್​ ವಿಚಾರಣೆಯಿಂದ ತಿಳಿದುಬಂದಿದೆ.

ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್​ ಹಾಗೂ ಪವನ ಕುಲಕರ್ಣಿ ಮಧ್ಯೆ ಈ ಹಿಂದಿನಿಂದಲೂ ವಿವಾದ ನಡೆಯುತ್ತಿತ್ತು. ಇಬ್ಬರಿಗೆ ಸಂಬಂಧಿಸಿದ ಜಾಗವು ಅಕ್ಕಪಕ್ಕದಲ್ಲೇ ಇದ್ದು, ಇಂದು ಮತ್ತೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆಗ ಸುಶಾಂತ ಗುಂಡು ಹಾರಿಸಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಸುಶಾಂತನನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಹುಬ್ಬಳ್ಳಿ – ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ ಎಂ. ವಿದ್ಯಾಗಿರಿ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿರುವುದಾಗಿ ಸುಶಾಂತ ಹೇಳುತ್ತಿದ್ದು, ಈ ಬಗ್ಗೆ ರಿವಾಲ್ವಾರ್ ಲೈಸೆನ್ಸ್ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ