Breaking News

ಬಿಜೆಪಿ ತ್ಯಜಿಸುವ ಕುರಿತು ಸುದ್ದಿಗಳಿಗೆ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗು ಶಿವಮಾರ್ ಹೆಬ್ಬಾರ್ ಸ್ಪಷ್ಟನೆ

Spread the love

ಬೆಂಗಳೂರು : “ನಾನು ಪಕ್ಷ ಬಿಡುವುದೂ ಇಲ್ಲ, ಲೋಕಸಭೆ ಚುನಾವಣೆಗೂ ಸ್ಪರ್ಧಿಸುವುದಿಲ್ಲ” ಎಂದು ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಶೇ.100ರಷ್ಟು ಕಾಂಗ್ರೆಸ್​ಗೆ ಹೋಗಲ್ಲ. ನನ್ನ ಮಗನೂ ರಾಜಕೀಯಕ್ಕೆ ಬರಲ್ಲ. ಒಂದು ವೇಳೆ ಹಾಗೆ ಮಾಡಿದರೆ ಆ ದಿನವೇ ಬಂದು ನನ್ನನ್ನು ಕೇಳಿ” ಎಂದರು.

“ಕೆಲವರು ಶಾಸಕ ಮುನಿರತ್ನ ಅವರ ಕ್ಷೇತ್ರದಿಂದ ಕಾಂಗ್ರೆಸ್​ಗೆ ಹೋಗಿದ್ದಾರೆ. ಇನ್ನು ಕೆಲವರು ಕೆ.ಆರ್.ಪುರಂನಿಂದಲೂ ಹೋಗಿದ್ದಾರೆ. ಆ ರೀತಿ ನನ್ನ ಕ್ಷೇತ್ರದಲ್ಲೂ ಹೋಗಿದ್ದಾರೆ. ಆದರೆ ನನ್ನ ಮೇಲೆ ಏಕೆ ಇಷ್ಟು ಸಂಶಯ” ಎಂದು ಪ್ರಶ್ನಿಸಿದರು.

ದೆಹಲಿಯಿಂದ ಕರೆ ಬಂದಿಲ್ಲ: “ದೆಹಲಿಗೆ ಹೋಗುವ ಬಗ್ಗೆ ಇಲ್ಲಿಯವರೆಗೆ ಕರೆ ಬಂದಿಲ್ಲ. ನಾನು ಕಾಯುತ್ತಿದ್ದೇನೆ. ಮೆಸೇಜ್ ಬಂದ್ರೆ ನಾಳೆ ಹೋಗುತ್ತೇನೆ. ನಾನು ಗೃಹ ಸಚಿವ ಅಮಿತ್ ಶಾ ಜೊತೆ ಚೆನ್ನಾಗಿದ್ದೀನಿ. ಅವರು ಸಹಕಾರ ಮಂತ್ರಿ, ನಾನು ಸಹಕಾರ ಮಂತ್ರಿ ಆಗಿದ್ದೆ ಅಷ್ಟೇ” ಎಂದು ಹೇಳಿದರು.

ನಕಲಿ ಬಿಲ್ ಮಾಡಿದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಕ್ಷೇತ್ರದ ಜನತೆ ನನ್ನನ್ನು ನಾಲ್ಕು ಬಾರಿ ಗೆಲ್ಲಿಸಿದ್ದಾರೆ. ಹಾಗಾದರೆ ಕ್ಷೇತ್ರದ ಜನರು ನಮ್ಮನ್ನು ಯಾಕೆ ಗೆಲ್ಲಿಸಿದ್ರು?. ಅವರ ಅಭ್ಯರ್ಥಿಗಳು ನಾಲ್ಕು ಬಾರಿ ಸೋತಿದ್ದಾರೆ” ಎಂದು ಹೇಳಿದರು. “ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಆದೇಶ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲೂ ತನಿಖೆ ನಡೆಯುತ್ತಿದೆ. ನಕಲಿ ಎಂದು ಗೊತ್ತಾದರೆ ಕ್ರಮವಹಿಸಲಿ” ಎಂದು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ