Breaking News

ಕರ್ನಾಟಕ, ಮಹಾರಾಷ್ಟ್ರದ ಹಲವೆಡೆ ಬೈಕ್​ಗಳ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಳಗಾವಿ ಅಂಕಲಗಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಬೈಕ್‌ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 8.25 ಲಕ್ಷ ರೂ ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲಕಿನ ಕಳಂಭದ ನಿವಾಸಿ ಸಂತೋಷ ರಾಮಚಂದ್ರ ನಿಶಾನೆ (30) ಹಾಗೂ ಗೋಕಾಕ ತಾಲ್ಲೂಕಿನ ತೆಳಗಿನಹಟ್ಟಿಯ ಭರಮಪ್ಪ ಯಲ್ಲಪ್ಪ ಕೊಪ್ಪದ (21) ಬಂಧಿತರು. ಇವರಿಂದ ವಿವಿಧ ಕಂಪನಿಗಳ 23 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.

ಗೋಕಾಕ ನಗರ, ಗ್ರಾಮೀಣ ಪ್ರದೇಶದಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಆ.23ರಂದು ಕುಂದರಗಿ ಗ್ರಾಮದ ಲಕ್ಷ್ಮೀ ದೇವಸ್ಥಾನದ ಎದುರಿಗೆ ನಿಲ್ಲಿಸಿದ್ದ ಬೈಕ್‌ ಕೂಡ ಕಳ್ಳತನವಾಗಿತ್ತು. ಈ ಬಗ್ಗೆ ಮಾಲೀಕರು ಅಂಕಲಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದು ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು ಇಬ್ಬರು ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ. ವಿಚಾರಣೆ ವೇಳೆ ಮತ್ತಷ್ಟು ಬೈಕ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

 ಮಾರ್ಕೆಟ್​ ಪೊಲೀಸರು ವಶ ಪಶಪಡಿಸಿಕೊಂಡ ಬೈಕ್​ಗಳುಮಹಾರಾಷ್ಟ್ರದ ಕೊಲ್ಹಾಪುರ, ಕರವೀರ, ಇಂಚಲಕರಂಜಿ, ಹಾಥ್‌ ಕಣಗಲಾ ಹಾಗೂ ಕರ್ನಾಟಕದ ಬೆಳಗಾವಿ, ಗೋಕಾಕ, ಅಂಕಲಗಿ, ನಿಪ್ಪಾಣಿ, ಹುಕ್ಕೇರಿ, ಸಂಕೇಶ್ವರ ಸೇರಿದಂತೆ ಇನ್ನೂ ಹಲವೆಡೆ ಬೈಕ್​ ಕಳ್ಳತನ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ