Breaking News

ದೂದ್​ ಪೇಡಾ ದಿಗಂತ್ ನಟನೆಯ ‘ಪೌಡರ್​’ ಸಿನಿಮಾದ ಮುಹೂರ್ತ ಸಮಾರಂಭ, ಕಿಚ್ಚ ಸುದೀಪ್​ ಸಾಥ್​

Spread the love

ದೂದ್​ ಪೇಡಾ ದಿಗಂತ್ ನಟನೆಯ ‘ಪೌಡರ್​’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್​ ಪೇಡಾ ದಿಗಂತ್​. ಫಿಟ್ನೆಸ್​ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್​ ಹಂಕ್​ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.

ಚಿತ್ರಕ್ಕೆ ‘ಪೌಡರ್​’ ಎಂದು ವಿಭಿನ್ನವಾಗಿ ಟೈಟಲ್​ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.

 ‘ಪೌಡರ್​’ ಚಿತ್ರತಂಡಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್​ ಮಾಡುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಕಾರ್ತಿಕ್​ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮರಾ ಸ್ವಿಚ್ಡ್​​ ಆನ್​ ಮಾಡಿದರು. ಈ ಶುಭ ಸಂದರ್ಭದಲ್ಲಿ ದಿಗಂತ್​, ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.


Spread the love

About Laxminews 24x7

Check Also

ಬಾಲಕನ ರಕ್ಷಣೆಗೆ ಇಳಿದ ಸಹೋದರರಿಬ್ಬರು ನೀರುಪಾಲು: 15 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಅಣ್ಣ!

Spread the loveಮೈಸೂರು: ವರುಣಾ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನೀರುಪಾಲಾದ ದಾರುಣ ಘಟನೆ ಮೈಸೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ