Breaking News

ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ………

Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಲಾಕ್‍ಡೌನ್ ವೇಳೆ ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ದರ್ಶನ್ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇದೀಗ ಲಾಕ್‍ಡೌನ್ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. “ಕೊರೊನಾ ಲಾಕ್‍ಡೌನ್‍ನಿಂದ ಸಣ್ಣ ಉದ್ಯಮಗಳು ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿವೆ. ಲಾಕ್‍ಡೌನ್ ಮುಗಿದ ನಂತರ ಸ್ಥಳೀಯ ಮಾರಾಟಗಾರರಿಂದ ತರಕಾರಿಗಳನ್ನು ಖರೀದಿಸಿ. ಸ್ಟಾರ್ ಹೋಟೆಲ್‍ಗೆ ಹೋಗಿ ಕಾಫಿ ಕುಡಿಯುವ ಬದಲು ನಿಮ್ಮ ಮನೆಯ ಹತ್ತಿರ ಇವರ ಅಂಗಡಿಗೆ ಹೋಗಿ ಕಾಫಿ ಕುಡಿಯಿರಿ. ಅಮೆಜಾನ್ ಬದಲಿಗೆ ಸ್ಥಳೀಯ ಕಿರಾಣಿ ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಖರೀದಿಸಿ. ಈ ಕೊರೊನಾ ಮಹಾಮಾರಿ ವೇಳೆ ಸಣ್ಣ ವ್ಯಾಪಾರಿಗಳಿಗೆ ನಿಮ್ಮ ಸಹಾಯದ ಅಗತ್ಯವಿದೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

“ಅಮೆಜಾನ್, ಪಿಜ್ಜಾ, ಕೆಎಫ್‍ಸಿ, ಮ್ಯಾಕ್ ಡೊನಾಲ್ಡ್ ಲಾಕ್‍ಡೌನ್ ಇದ್ದರೂ ಬದುಕುತ್ತವೆ. ಆದರೆ ಸಣ್ಣ ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಕ್ಕಪಕ್ಕದ ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ. ಇದರಿಂದ ಅವರ ಬದುಕಿಗೆ ಸಹಾಯ ಆಗತ್ತೆ” ಅಂತ ವಿಜಯಲಕ್ಷ್ಮೀ ಟ್ವೀಟ್ ಮಾಡಿದ್ದಾರೆ.ಮೇ 19 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿಯ ವಿವಾಹ ವಾರ್ಷಿಕೋತ್ಸವ ಇತ್ತು. ಅಂದು ಡಿ ಬಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರಿದ್ದಾರೆ. ದರ್ಶನ್ ಮತ್ತು ವಿಜಯಲಕ್ಷ್ಮಿ ಅವರು ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಡಿ ಬಾಸ್ ಹಾಗೂ ವಿಜಯಲಕ್ಷ್ಮಿಯವರ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನದಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಿನಿ ತಾರೆಯರ ಸಮ್ಮುಖದಲ್ಲಿ ನಡೆದಿತ್ತು.

View image on Twitter


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ