Breaking News

ಜಪ್ತಿ ಮಾಡಿದ ಡ್ರಗ್ಸ್​ ಮಾರಾಟಕ್ಕೆ ಯತ್ನ ಆರೋಪ: ಹೈದರಾಬಾದ್​ನಲ್ಲಿ ಎಸ್​ಐ ಅರೆಸ್ಟ್​​

Spread the love

ಹೈದರಾಬಾದ್​ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಡ್ರಗ್ಸ್​ ಪ್ರಕರಣದಲ್ಲಿ ಪೊಲೀಸ್​ ಸಬ್​​ ಇನ್ಸ್​ಪೆಕ್ಟರ್​​ವೊಬ್ಬರು ಸಿಕ್ಕಿ ಬಿದ್ದಿದ್ದಾರೆ.

ಪೊಲೀಸ್​ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್​ ಕದ್ದು ಅದನ್ನೇ ಮಾರಾಟ ಮಾಡಲು ಎಸ್​ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್​ಅನ್ನು ತಮ್ಮ ಬಳಿ ಈ ಎಸ್​ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ.

ಸೈಬರಾಬಾದ್‌ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್‌ಐ. ರಾಜೇಂದರ್​ ಬಳಿ ಡ್ರಗ್ಸ್​ ಇರುವ ಮಾಹಿತಿ ಮೇರೆಗೆ ನಾರ್ಕೋಟಿಕ್ಸ್ ಇಲಾಖೆ ಅಧಿಕಾರಿಗಳು, ಈತನ ಮನೆ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ನಂತರ ತೆಲಂಗಾಣ ಮಾದಕ ದ್ರವ್ಯ ನಿಗ್ರಹ ದಳದ (ಟಿಎಸ್‌ಎನ್‌ಎಬಿ) ನಿರ್ದೇಶಕ ಹಾಗೂ ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರಿಗೆ ವರದಿ ಸಲ್ಲಿಸಿದ್ದಾರೆ. ಬಳಿಕ ಆರೋಪಿ ರಾಜೇಂದರ್ ಅವರನ್ನು ರಾಯದುರ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ