ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್ಬಳಿ ಇಂದು ನಡೆದಿದೆ.
ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಸಾತನೂರು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೀವ್ರವಾಗಿ ಗಾಯಗೊಂಡವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.