Breaking News

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉತ್ಪಾದನೆಯನ್ನು ಪುನಾರಂಭಿಸಿದೆ.

Spread the love

ಶಿವಮೊಗ್ಗ: ಭದ್ರಾವತಿ ಪಟ್ಟಣದ ಆಶಾಕಿರಣವಾಗಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉತ್ಪಾದನಾ ಕಾರ್ಯವನ್ನು ಪುನಾರಂಭಿಸಿದೆ. ಇದರಿಂದ ಕಾರ್ಖಾನೆಯ ಕಾರ್ಮಿಕರಲ್ಲಿ ಸಂತಸ ಮನೆ ಮಾಡಿದೆ.

ನಿನ್ನೆಯಿಂದ ಕಾರ್ಖಾನೆಯ ಎನ್​ಆರ್​ಎಂ ಘಟಕ ಆರಂಭಗೊಂಡಿದೆ. 6 ದಿನಗಳ ಹಿಂದೆ ಉಕ್ಕು ಪ್ರಾಧಿಕಾರದ ಬಿಲಾಯ್ ಘಟಕದಿಂದ 19 ರೈಲು ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳು ಕಾರ್ಖಾನೆಗೆ ಬಂದಿದ್ದವು. ಇದರಿಂದ ಎನ್‌ಆರ್‌ಎಂ ಘಟಕ ಕಾರ್ಯವನ್ನು ಶುರು ಮಾಡಿದೆ.

ವಿಐಎಸ್‌ಎಲ್ ಕಾರ್ಖಾನೆಯು ಆಗಸ್ಟ್ 10 ರಿಂದಲೇ ಪ್ರಾರಂಭವಾಗಬೇಕಿತ್ತು. ಆದರೆ NRM ಘಟಕದ ವಿದ್ಯುತ್ ವಿಭಾಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಅಲ್ಲದೆ ಕಚ್ಚಾ ವಸ್ತುಗಳು ಕಾರ್ಖಾನೆಗೆ ಬರುವುದು ತಡವಾಯಿತು. ಇದರಿಂದ ನಿನ್ನೆಯಿಂದ ಕಾರ್ಖಾನೆಯಲ್ಲಿ ಕೆಲಸ ಪ್ರಾರಂಭವಾಗಿದೆ. ಕಾರ್ಮಿಕರು ಬ್ಲೂಮ್​ಗೆ ಹಾಗೂ ಮಿಷನ್​​ಗಳಿಗೆ ಪೂಜೆ ಸಲ್ಲಿಸಿ ಕೆಲಸವನ್ನು ಪ್ರಾರಂಭಿಸಿದ್ದಾರೆ.

ಗುತ್ತಿಗೆ ಕಾರ್ಮಿಕರ ಧರಣಿ ಮುಂದುವರಿಕೆ: ವಿಐಎಸ್‌ಎಲ್​ನ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಪುನಾರಂಭವಾಗಬೇಕು ಹಾಗೂ ದುಡಿಯುವ ಕೈಗಳಿಗೆ ಕೆಲಸ ಸಿಗಬೇಕೆಂದು ಆಗ್ರಹಿಸಿ ಕಳೆದ 8 ತಿಂಗಳಿಂದ ಗುತ್ತಿಗೆ ಕಾರ್ಮಿಕರು ಧರಣಿ ನಡೆಸುತ್ತಿದ್ದರು. ಈಗ ಕಾರ್ಖಾನೆ ಪ್ರಾರಂಭವಾದರು ಸಹ ತಮ್ಮ ಧರಣಿಯನ್ನು ಮುಂದುವರೆಸುವುದಾಗಿ ತಿಳಿಸಿರುವ ಗುತ್ತಿಗೆ ಕಾರ್ಮಿಕರ ಸಂಘ, ಕಾರ್ಮಿಕರಿಗೆ ಕಡ್ಡಾಯವಾಗಿ 26 ದಿನ ಕೆಲಸ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿಯನ್ನು ಆಗ್ರಹಿಸಿದೆ‌.

ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತು ಹಾಗೂ ಖಾಸಗಿ ಮಾರಾಟ ಮಾಡುವ ಕುರಿತು ಟೆಂಡರ್ ಕರೆದಾಗ ಯಾರೂ ಸಹ ಮುಂದೆ ಬಾರದೆ ಇರುವ ಕಾರಣ ಸೆಲ್​ನವರು ಈಗ ಉತ್ಪಾದನೆಗೆ‌ ಮುಂದಾಗಿದ್ದಾರೆ. ವಿಐಎಸ್‌ಎಲ್ ಉತ್ಪಾದನೆ ಮಾಡುವ ವಸ್ತುಗಳಿಗೆ ಭಾರತೀಯ ಸೈನ್ಯದಲ್ಲಿ ಸಾಕಷ್ಟು ಬೇಡಿಕೆ ಇದೆ. ಸಂಸದ ಬಿ ವೈ ರಾಘವೇಂದ್ರ ಅವರು ದೆಹಲಿ ಮಟ್ಟದಲ್ಲಿ ನಡೆಸಿದ ಸತತ ಪ್ರಯತ್ನದ ಫಲವಾಗಿ ಕಾರ್ಖಾನೆ ಪುನಾರಂಭ ಮಾಡಿದೆ. ಸೆಲ್ ನಿಂದ ಒಂದು ವರ್ಷದ ಅವಧಿಗೆ ಕಾರ್ಖಾನೆಯು ಕಾರ್ಯ ನಿರ್ವಹಿಸಲಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ