Breaking News

ದಶಕದಿಂದ ಪಡತರವಾಡಿ ಗ್ರಾಮಕ್ಕಿಲ್ಲ ಬಸ್​ ಸಂಪರ್ಕ.. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ, ಗ್ರಾಮಸ್ಥರಿಗೂ ತೊಂದರೆ

Spread the love

ಚಿಕ್ಕೋಡಿ: ಅಥಣಿ ತಾಲೂಕಿನ ಪಡತರವಾಡಿ ಗ್ರಾಮಕ್ಕೆ ಸರಿಯಾದ ಬಸ್​ ಸಂಪರ್ಕವಿಲ್ಲದೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಮತ್ತು ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಈ ಗ್ರಾಮಕ್ಕೆ ಕಳೆದ 15 ವರ್ಷಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು ಗ್ರಾಮದ ಜನರು, ವಿದ್ಯಾರ್ಥಿಗಳು, ವಯೋವೃದ್ಧರು, ಮಹಿಳೆಯರಿಗೆ ತೊಂದರೆಯಾಗಿದೆ.

ಒಂದೂವರೆ ಕಿಲೋಮೀಟರ್ ದೂರದ ಐಗಳಿ-ತೆಲಸಂಗ್ ರಸ್ತೆಗೆ ಸಂಚಾರ ಮಾಡಿ ಬಳಿಕ ಅಲ್ಲಿಂದ ಬೇರೊಂದು ಬಸ್ ಮೂಲಕ ಊರುಗಳಿಗೆ ಸಂಚರಿಸಬೇಕಾಗಿದೆ​. ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ ಆದಷ್ಟು ಬೇಗನೆ ತಮ್ಮ ಗ್ರಾಮಕ್ಕೆ ಸರ್ಕಾರಿ ಬಸ್​ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲಿನ ಜನರು ಮನವಿ ಮಾಡಿದ್ದಾರೆ.

ಈ ಬಗ್ಗೆ ಗ್ರಾಮಸ್ಥರಾದ ಲಕ್ಷ್ಮಣ್ ಕೋಟ್ಯಾಳ ಹಾಗೂ ಜ್ಞಾನದೇವ ಜಾಧವ್​ ಎಂಬುವರು ಮಾತನಾಡಿ, ಕಳೆದ ಐದಿನೈದು ವರ್ಷದಿಂದ ನಮ್ಮ ಗ್ರಾಮಕ್ಕೆ ಬಸ್​ ಸಂಪರ್ಕವಿಲ್ಲದೆ ತುಂಬಾ ತೊಂದ್ರೆ ಉಂಟಾಗಿದೆ. ಸ್ಥಳೀಯ ಶಾಸಕ ಲಕ್ಷ್ಮಣ್ ಸವದಿ ಸಾರಿಗೆ ಸಚಿವರಾಗಿದ್ದ ವೇಳೆ ಬಸ್​ ಸಂಪರ್ಕ ಕಲ್ಪಿಸುವುಂತೆ ಮನವಿ ಸಲ್ಲಿಸಲಾಗಿತ್ತು. ಆದರೇ ಈವರೆಗೂ ಗ್ರಾಮಕ್ಕೆ ಬಸ್​ ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಆಗಲಾದರೂ ನಮ್ಮ ಸಮಸ್ಯೆ ಬಗರಹರಿಬಹುದು. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ದಿನನಿತ್ಯವೂ ತೊಂದರೆ ಅನುಭವಿಸುವಂತಾಗಿದೆ.

 


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ