Breaking News

9 ಅಡಿ ಉದ್ದದ ಅತಿ ದೊಡ್ಡ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ!

Spread the love

ಕಾರವಾರ (ಉತ್ತರ ಕನ್ನಡ) : ಸಾಮಾನ್ಯವಾಗಿ ಕಂದು ಬಣ್ಣದ ಹೆಬ್ಬಾವುಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ ಕುಮಟಾದಲ್ಲಿ 2ನೇ ಬಾರಿಗೆ ಬಿಳಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಭಾರತದಲ್ಲಿ ಈವರೆಗೆ ಸಿಕ್ಕ ಬಿಳಿ ಹೆಬ್ಬಾವಿನ ಪೈಕಿ ಇದು ಅತಿ ದೊಡ್ಡದೆಂದು ಉರಗ ತಜ್ಞರು ಹೇಳುತ್ತಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯ ಅಂಗಳದಲ್ಲಿ ಮಂಗಳವಾರ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿ‌ಗೆ ಶುಭ್ರ ಬಿಳಿ ಬಣ್ಣದ ಹಾವು ಕಂಡು ಆತಂಕಗೊಂಡ ಮನೆಯವರು ತಕ್ಷಣವೇ ಮನೆ ಸಮೀಪದ ಹೋಮ್ ಗಾರ್ಡ್ ಗಣೇಶ ಮುಕ್ರಿ‌ ಮೂಲಕ ಉರಗ ತಜ್ಞ ಪವನ್ ನಾಯ್ಕರನ್ನು ಸಂಪರ್ಕಿಸಿದ್ದರು. ರಾತ್ರಿ 12 ಗಂಟೆಯ ವೇಳೆ ಸ್ಥಳಕ್ಕಾಗಮಿಸಿದ ಅವರು, ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿದರು.

 

“ಬಿಳಿ ಹೆಬ್ಬಾವು ಕರ್ನಾಟಕದಲ್ಲಿ ಮೂರನೇ ಬಾರಿ ರಕ್ಷಣೆಯಾಗಿದೆ. ಈ ಪೈಕಿ 2 ಬಾರಿ ಕುಮಟಾದಲ್ಲೇ ಸಿಕ್ಕಿದೆ. ಮೊದಲ ಸಲ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪತ್ತೆಯಾಗಿತ್ತು. ಭಾರತದಲ್ಲೆಲ್ಲೂ ಇಷ್ಟೊಂದು ಉದ್ದದ ಬಿಳಿ ಹೆಬ್ಬಾವು‌ ಪ್ರತ್ಯಕ್ಷವಾದ ಮಾಹಿತಿ ಇಲ್ಲ. ಬಹುಶಃ ಇದೇ ದೇಶದ ಅತ್ಯಂತ ದೊಡ್ಡ ಹೆಬ್ಬಾವಾಗಿರಬಹುದು” ಎಂದು ಪವನ್ ನಾಯ್ಕ ಹೇಳುತ್ತಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ