ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಈ ಅಧಿಸೂಚನೆಯನ್ನು ಉಲ್ಲಂಘಿಸಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕದ ಕಡಲ ಮೀನುಗಾರಿಕೆ(ನಿಯಂತ್ರಣ) ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೇ, ಒಂದು ವಷರ್ಫದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗುತ್ತಾರೆಂದು ಅವರು ತಿಳಿಸಿದ್ದಾರೆ.