Breaking News

ಮಂಗಳೂರು: ಸಂಚರಿಸುತ್ತಿದ್ದ ಬಸ್​ನಿಂದ ಹೊರಗೆ ಬಿದ್ದು ಕಂಡಕ್ಟರ್ ಸಾವು​- ಘಟನೆಯ ವಿಡಿಯೋ ವೈರಲ್​

Spread the love

ಮಂಗಳೂರು: ಸಂಚಾರದಲ್ಲಿದ್ದ ನಗರ ಸಾರಿಗೆ ಬಸ್​ನಿಂದ ಕಂಡಕ್ಟರ್‌ ಹೊರಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿರುವ ಘಟನೆ ನಂತೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿವಾಸಿ, ಪ್ರಸ್ತುತ ಸುರತ್ಕಲ್ ತಡಂಬೈಲ್​​ನಲ್ಲಿ ನೆಲೆಸಿರುವ ಈರಯ್ಯ (23) ಮೃತಪಟ್ಟವರು. ಇವರು 15 ಸಂಖ್ಯೆಯ ಖಾಸಗಿ ಸಿಟಿ ಬಸ್ ನಿರ್ವಾಹಕರಾಗಿದ್ದರು. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಘಟನೆ ನಡೆದಿದೆ.

ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗವಾಗಿ ತಿರುವು ಪಡೆಯುತ್ತಿದ್ದಾಗ, ಮುಂಭಾಗದ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆಗೆ ಮೃತಪಟ್ಟಿದ್ದಾರೆ. ಬಸ್​ನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಯಾಣಿಕನನ್ನು ಬಸ್‌ನಿಂದ ತಳ್ಳಿದ ಕಂಡಕ್ಟರ್ (ಪ್ರತ್ಯೇಕ ಪ್ರಕರಣ)​: ಕೆಎಸ್​​​​ಆರ್​​ಟಿಸಿ ಬಸ್​​​ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ (ಸೆಪ್ಟೆಂಬರ್- 7-2022) ನಡೆದಿತ್ತು. ಈಶ್ವರಮಂಗಲ ಪೇಟೆಯ ಜಂಕ್ಷನ್​​​ನಲ್ಲಿ ಘಟನೆ ನಡೆದಿದೆ. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಕೆಎ 21 ಎಫ್ 0002 ಬಸ್‌ ನಂಬರ್‌ನ ನಿರ್ವಾಹಕ ಸುಬ್ಬರಾಜ್ ರೈ ಎಂದು ಗುರುತಿಸಲಾಗಿತ್ತು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ