Breaking News

ಶಿವಮೊಗ್ಗದಲ್ಲಿ ಇಂದಿನಿಂದ ಲೋಹದ ಹಕ್ಕಿಗಳ ಹಾರಾಟ

Spread the love

ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

 

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ 6E 77312 ವಿಮಾನವು ಕುವೆಂಪು ವಿಮಾನ ನಿಲ್ದಾಣದಿಂದ 11:25 ಕ್ಕೆ ಹೊರಟು 12:25 ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ RQY ಎಂದು ಅಂತಾರಾಷ್ಟ್ರೀಯ ಕೋಡ್ ಲಭ್ಯವಾಗಿದೆ: ಪ್ರತಿಯೊಂದು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯವಾಗಿ ಗುರುತಿಸಲು ಒಂದೊಂದು ಕೋಡ್ ನೀಡಲಾಗುತ್ತದೆ. ಅದರಂತೆ ಶಿವಮೊಗ್ಗದ ಏಪೋರ್ಟ್​ಗೆ RQY ಎಂಬ ಕೋಡ್ ನೀಡಲಾಗಿದೆ. ವಿಮಾನದ ಟಿಕೆಟ್​ ಬುಕ್ಕಿಂಗ್​ ವೇಳೆ ಇದು ಅತಿ ಮುಖ್ಯವಾಗಿರುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರಿಂದಾಗಿತ್ತು ಉದ್ಘಾಟನೆ: 2023 ಫೆಬ್ರವರಿ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೋಯಿಂಗ್ ವಿಮಾನದಲ್ಲಿ ಆಗಮಿಸಿ ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿದ್ದರು. ನಂತರದಲ್ಲಿ ಪ್ರಧಾನ ಮಂತ್ರಿ ಚುನಾವಣಾ ಪ್ರಚಾರಕ್ಕಾಗಿ ಇದೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿರವರು ಸಹ ಈ ವಿಮಾನ‌ ನಿಲ್ದಾಣಕ್ಕೆ ತಮ್ಮ ಖಾಸಗಿ ವಿಮಾನದಲ್ಲಿ ಆಗಮಿಸಿದ್ದರು.

ಇಂದು ಸಚಿವರಾದ ಎಂ.ಬಿ.ಪಾಟೀಲ್ ಅವರು ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಮಾನದಲ್ಲಿ ಆಗಮಿಸಲಿದ್ದಾರೆ. ವಿಮಾನವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸ್ಬಾಗತಿಸಲಿದ್ದಾರೆ. ನಂತರ ವಿಮಾನ ನಿಲ್ದಾಣದಲ್ಲಿ 20 ನಿಮಿಷದ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಿಂದ ಬಂದ ಸಚಿವರಾದ ಎಂ.ಬಿ.ಪಾಟೀಲ್​ ಅವರು ಅದೇ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ