ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ.ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಬಳಿಕ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಕೃಷ್ಣ ಮೇಲ್ದಂಡೆ ಯೋಜನೆ 3ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆ ನಡೆಸಿದರು. ಕೆಬಿಜೆಎನ್ಎಲ್ ಎಂಡಿ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.