Breaking News

ಲೋಕಸಭೆ ಚುನಾವಣೆ ತಯಾರಿ: ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ

Spread the love

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ ಕರೆಯಲಾಗಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ದುಡಿದ ಪ್ರಚಾರ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರವಾರು ಸಮಿತಿಗಳ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದು ಸಭೆಯ ಉದ್ದೇಶವಾಗಿದೆ. ಈ ಮೂಲಕ ಪದಾಧಿಕಾರಿಗಳನ್ನು ಹತ್ತಿರದಲ್ಲೇ ಇರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಹುರಿದುಂಬಿಸುವುದು ಪಕ್ಷದ ಚಿಂತನೆಯಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್​ನ ಉತ್ಸಾಹ ಇಮ್ಮಡಿಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ ಫಲಿತಾಂಶ ಬರುವಂತೆ ನೋಡಿಕೊಳ್ಳಲು ಬಯಸುತ್ತಿದೆ. ಇದಕ್ಕೆ ವೇದಿಕೆಯಾಗಿ, ಭಾನುವಾರದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಬೆಳಗ್ಗೆ 11ಗಂಟೆಗೆ ಆರಂಭವಾಗುವ ಸಭೆ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ಪ್ರಚಾರ ಸಮಿತಿಯ ಸಮನ್ವಯಕಾರ ಎ ಪಿ ಬಸವರಾಜ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ