ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.

Spread the love

ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ದುರಂತ ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ.

ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42) ಮತ್ತು ತಬ್ರೇಜ್ (13) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನರ್ಗೀಸ್, ರೆಹಾನ್, ರೆಹಮಾನ್​ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಪಿಲಿಭಿತ್​​​ನಲ್ಲಿ ಭೀಕರ ರಸ್ತೆ ಅಪಘಾತ: ಉತ್ತರ ಪ್ರದೇಶದ ಪಿಲಿಭಿತ್​ನ ಸಿತಾಪುರ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಭಯಾನಕ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಎಳೆಯ ಮಗುವೂ ಸೇರಿದೆ. ಘಟನೆಯ ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಗಾಯಗೊಂಡ ಎಲ್ಲರೂ ಕೂಡಾ ಲಖನೌದದವರಾಗಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ