ಬೆಂಗಳೂರು : ಪೂರ್ಣಗೊಂಡ ಬಿಬಿಎಂಪಿ ಕಾಮಗಾರಿಗಳ ಶೇ. 50ರಷ್ಟು ಹಣ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ.50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣ ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.