Breaking News

ಇದೇ ಸೆ.7ಕ್ಕೆ ಒಂದು ಗಂಟೆ ಕಾಲ ಪಾದಯಾತ್ರೆ : ಡಿಸಿಎಂ ಡಿ. ಕೆ ಶಿವಕುಮಾರ್

Spread the love

ಒಂದು ಗಂಟೆ ಕಾಲ ಪಾದಯಾತ್ರೆ : ಇದೇ ಸೆ.7ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದರ ನೆನಪಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಿದ್ದೇವೆ. ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿ ಅವರು ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು ಎಂದು ಯೋಚನೆ ಇತ್ತು. ನಾಗರಿಕರಿಗೆ ಟ್ರಾಫಿಕ್ ಸಮಸ್ಯೆ ಆಗುತ್ತದೆ ಎಂದು ಕೈಬಿಡಲಾಯಿತು. ಸೆ.7 ರಂದು ಕ್ಯಾಬಿನೆಟ್ ಸಭೆ ಇರುವ ಕಾರಣ ಜಿಲ್ಲಾ ಮಂತ್ರಿಗಳು ಆಯಾಯ ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ