Breaking News

ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯ ಅತ್ಯಾಚಾರಕ್ಕೆ ಯತ್ನ

Spread the love

ಗಂಗಾವತಿ (ಕೊಪ್ಪಳ): ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಅಬ್ದುಲ್​ ರಜಾಕ್​ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ-ತಾಯಿ ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಆಕೆಗೆ ಬ್ಯಾಟ್​, ಬಾಲ್​ ಕೊಡುವುದಾಗಿ ಹೇಳಿ ಪುಸಲಾಯಿಸಿ, ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ತಾಯಿ ಮನೆಗೆ ಬಂದಾಗ ಬಾಲಕಿಯು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಆತ ಸಿಗದ ಹಿನ್ನೆಲೆ ನಗರ ಪೊಲೀಸ್​ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ