Breaking News

ಮಹಾರಾಷ್ಟ್ರದಿಂದ ಬಂದ ಮಕ್ಕಳಿಗೂ ಕೊರೊನಾ ಪಾಸಿಟಿವ್………

Spread the love

ಯಾದಗಿರಿ: ಮಹಾರಾಷ್ಟ್ರದಿಂದ ಯಾದಗಿರಿಗೆ ಬಂದಿರುವ ಇಬ್ಬರು ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿದೆ.

ರೋಗಿ ಸಂಖ್ಯೆ-1733, 06 ವರ್ಷದ ಹೆಣ್ಣು ಮಗು ಮತ್ತು ರೋಗಿ ಸಂಖ್ಯೆ-1743, 09 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಮೊದಲ ಹಂತದ ಮಾಹಿತಿ ಸಂಗ್ರಹಣೆ ಸಂದರ್ಭದಲ್ಲಿ ಇಬ್ಬರು ಮಕ್ಕಳು ಮಹಾರಾಷ್ಟ್ರದಿಂದ ಬಂದಿರುವುದು ಎಂಬುದು ತಿಳಿದುಬಂದಿದೆ. ಇಬ್ಬರ ಸಮಗ್ರ ಟ್ರಾವೆಲ್ ಹಿಸ್ಟರಿ ಪತ್ತೆಗಾಗಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ.

ಸದ್ಯ ಇಬ್ಬರು ಮಕ್ಕಳಿಗೂ ಯಾದಗಿರಿ ನಗರದ ಹೊರ ವಲಯದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರ ಮತ್ತು ಮುಂಬೈನಿಂದ ಬಂದವರಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇಷ್ಟು ದಿನ ಗ್ರೀನ್ ಝೋನ್‍ಪಟ್ಟಿಯಲ್ಲಿದ್ದ ಯಾದಗಿರಿ ಈಗ ರೆಡ್ ಝೋನ್ ಹಂತಕ್ಕೆ ಹತ್ತಿರವಾಗುತ್ತಿದ್ದು, ಸಹಜವಾಗಿಯೇ ಜಿಲ್ಲಾಡಳಿತ ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ.


Spread the love

About Laxminews 24x7

Check Also

ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ

Spread the loveಯಾದಗಿರಿ: ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ