Breaking News

ಬೆಳಗಾಗುವುದರೊಳಗೆ ರೈತ ಕೋಟ್ಯಧಿಪತಿ

Spread the love

ಚಾರ್ಖಿ ದಾದ್ರಿ(ಹರಿಯಾಣ): ಇಲ್ಲಿನ ಚರ್ಖಿ ದಾದ್ರಿ ಜಿಲ್ಲೆಯ ರೈತನೊಬ್ಬ ತನ್ನ ಬ್ಯಾಂಕ್ ಖಾತೆಗೆ 200 ಕೋಟಿ ರೂಪಾಯಿ ಜಮೆ ಆಗಿದೆ ಎಂದು ಹೇಳಿಕೊಂಡಿದ್ದಾನೆ.

ಈ ಪ್ರಕರಣವೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಿಗೂಢ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಹರಿಯಾಣ ಪೊಲೀಸರು ಗುರುವಾರ ಸ್ಪಷ್ಟಪಡಿಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬ್ಯಾಂಕ್‌ಗೆ ಭೇಟಿ ನೀಡವುದಾಗಿ ಪೊಲೀಸರು ತಿಳಿಸಿದ್ದಾರೆ. ತಮ್ಮ ಖಾತೆಗೆ ಹಣ ಬಂದಿರುವ ಬಗ್ಗೆ ರೈತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಸಂಬಂಧ ಮಾಹಿತಿ ಪಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ತನ್ನ ಖಾತೆಗೆ ಹಣ ಹೇಗೆ ಬಂತು ಮತ್ತು ಎಲ್ಲಿಂದ ಹಣ ವರ್ಗಾವಣೆಯಾಗಿದೆ ಎಂಬುದು ಖಚಿತವಾಗಿಲ್ಲ ಎಂದು ರೈತ ವಿಕ್ರಂ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರೊಂದಿಗೆ ಗುರುವಾರ ರೈತ ಪೊಲೀಸ್ ಠಾಣೆಗೆ ಆಗಮಿಸಿ ಪೊಲೀಸರಿಗೆ ದೂರು ಸಲ್ಲಿಸಿದರು. ಇದೇ ವೇಳೆ ತಮಗೆ ರಕ್ಷಣೆ ನೀಡಬೇಕು ಎಂದು ಕೂಡಾ ಕೋರಿಕೊಂಡಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ವಿಕ್ರಂ, ಬ್ಯಾಂಕ್ ಖಾತೆ ಪರಿಶೀಲಿಸಿದ್ದೇವೆ. ಖಾತೆಯಲ್ಲಿ ಕೋಟ್ಯಂತರ ರೂಪಾಯಿ ಹಣವಿದೆ, ಆದರೆ, ಬ್ಯಾಂಕ್ ಖಾತೆಯಲ್ಲಿದ್ದ 200 ಕೋಟಿ ರೂಪಾಯಿ ಬದಲು 60 ಸಾವಿರ ರೂಪಾಯಿ ವಂಚನೆ ಮಾಡಿರುವುದನ್ನು ಪೊಲೀಸರು ಒಪ್ಪಿಕೊಂಡಿದ್ದಾರೆ ಎಂದು ರೈತ ಹೇಳುತ್ತಿದ್ದಾನೆ.

ರಕ್ಷಣೆ ನೀಡುವಂತೆ ಪೊಲೀಸರಿಗೆ ಮೊರೆ ಇಟ್ಟ ರೈತ: ರೈತನಿಂದ ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವ ಪೊಲೀಸರು, ಖಾತೆಯಲ್ಲಿ ಇರುವ ಹಣ ಹಾಗೂ ಅದರ ಮೂಲಕದ ತನಿಖೆಗಾಗಿ ಶುಕ್ರವಾರ ಬ್ಯಾಂಕ್‌ಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ತಮಗೆ ಗೊತ್ತಿಲ್ಲದೇ ಇಷ್ಟೊಂದು ಹಣ ತಮ್ಮ ಖಾತೆಗೆ ಜಮೆ ಆಗಿರುವ ಹಿನ್ನೆಲೆಯಲ್ಲಿ ನನ್ನ ಕುಟುಂಬ ವರ್ಗ ತುಂಬಾ ಭಯ ಭೀತವಾಗಿದೆ. ಹಾಗಾಗಿ ಈ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಎಂದು ರೈತ ವಿಕ್ರಮ್ ಪೊಲೀಸರನ್ನು ಕೋರಿಕೊಂಡಿದ್ದಾರೆ. ವಂಚನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕ್ರಮ ಕೈಗೊಳ್ಳುವಂತೆ ವಿಕ್ರಮ್ ಆಗ್ರಹಿಸಿದ್ದಾರೆ. ಈ ದೂರನ್ನು ಉನ್ನತ ಪೊಲೀಸ್​ ಅಧಿಕಾರಿಗಳಿಗೂ ಸಲ್ಲಿಸಲಾಗಿದೆ.


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ