Breaking News

ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಪ್ರತಿಕ್ರಿಯೆ

Spread the love

ಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ‘ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ. ಈ ವಿಷಯದಲ್ಲಿ ಅಧಿಕೃತ ಮಾಹಿತಿ ಬರುವವರೆಗೆ ನಾನು ಏನು ಹೇಳುವುದಿಲ್ಲ’ ಎಂದರು.

ಶುಕ್ರವಾರ (ನಿನ್ನೆ) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಿಎಂಕೆ ನಾಯಕ ಎ ರಾಜಾ ಮತ್ತು ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ಖಂಡಿಸುವ ಪ್ರಯತ್ನ ಮಾಡಿಲ್ಲ. ಘಮಂಡಿಯಾ ಘಟಬಂಧನ ಪ್ರಚಾರ ಬಹಳಷ್ಟು ನಡೆಯುತ್ತಿದೆ. ಇದು ಅರ್ಥವಿಲ್ಲದ ಘಟಬಂಧನ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ‌ ನಡೆಸಿದರು.

ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಮ್ಯೂನಿಸ್ಟ್‌ ವಿರುದ್ಧ ಕಾಂಗ್ರೆಸ್ ಸಾಕಷ್ಟು ಕಡೆ ಸ್ಪರ್ಧೆ ಮಾಡಿದೆ. ಮುಂಬೈ, ಪಾಟ್ನಾ, ದೋಸ್ತಿ. ಕೇರಳದಲ್ಲಿ ಕುಸ್ತಿ. ಇದು ಅವರ ನೀತಿಯಾಗಿದೆ. ಮಮತಾ ಬ್ಯಾನರ್ಜಿಯವರು ಕಮ್ಯೂನಿಸ್ಟ್‌ ವಿರುದ್ಧವಾಗಿ ಸ್ಪರ್ಧೆ ಮಾಡಿದ್ದಾರೆ. ಇದು ತುಷ್ಟೀಕರಣದ ಘಟಬಂಧನ. ಇದರಿಂದ ದೇಶದ ಸನಾತನ ಧರ್ಮ ಹಾಗೂ ಸಂಸ್ಕೃತಿಗಳನ್ನು ಹಿಯಾಳಿಸುವ ಕೆಲಸವಾಗಿದೆ ಎಂದು ಜೋಶಿ ಹರಿಹಾಯ್ದರು. ಕೇವಲ ವೋಟಗಾಗಿ‌ ಹಿಂದೂ ಧರ್ಮವನ್ನು ಹಿಯಾಳಿಸಲಾಗುತ್ತಿದೆ. ದೇಶದ ಜನರನ್ನು ಇವರು ಬೇಕೆಂದೇ ಹಿಯಾಳಿಸುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿದೆ. ರಾಹುಲ್ ಗಾಂಧಿ ದೇವಸ್ಥಾನಕ್ಕೆ ಹೋಗಿ ಪೂಜೆ‌ ಮಾಡಿಸಿ ಡ್ರಾಮಾ ಮಾಡುತ್ತಾರೆ ಎಂದರು.

ಮೋದಿಯವರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಟ್ವಿಟ್​​ಗೆ ಪ್ರತಿಕ್ರಿಯಿಸಿದ ಜೋಶಿ ‘ಸಿದ್ದರಾಮಯ್ಯನವರೇ ಏನು ಮಾತನಾಡುತ್ತಿದ್ದಿರಿ?. ನೀವು ತುಷ್ಟೀಕರಣದಿಂದ ರಾಜ್ಯದಲ್ಲಿ ಗೆದ್ದಿರಬಹುದು. ಆದರೆ ನೀವು ದೇಶದ ಲೋಕಸಭೆಯಲ್ಲಿ ಕಳೆದ 10 ವರ್ಷಗಳಿಂದ ವಿರೋಧ ಪಕ್ಷದವರಾಗಿಲ್ಲ. ಕಳೆದ 45 ವರ್ಷದಿಂದ ದೇಶದಲ್ಲಿ ಸ್ವಂತ ತಾಕತ್ತಿನ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಕಾಂಗ್ರೆಸ್​ನ ಮುತ್ತಜ್ಜ, ಅಜ್ಜ, ಮಗ ಇವರೇ ಆಡಳಿತ ನಡೆಸಿದ್ದರು. ಇವರ ಕೈಯಲ್ಲಿ ಸರ್ವಸ್ವವೂ ಇತ್ತು. ಆದರೆ ವಿಪಕ್ಷ ನಾಯಕ ಸ್ಥಾನ ಕಳೆದುಕೊಂಡಿದ್ದೀರಿ. ಬಹಳ ದುರಹಂಕಾರದಲ್ಲಿ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ