Home / ರಾಜಕೀಯ / ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Spread the love

ಬೆಂಗಳೂರು : ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಹೆಸರು ಹೇಳದೆಯೇ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡದೇ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಪರೋಕ್ಷವಾಗಿ ಸಿಎಂ ಹೆಸರು ಉಲ್ಲೇಖಿಸದೇ ಹ್ಯೂಬ್ಲೆಟ್ ವಾಚ್ ಬಗ್ಗೆ ಪ್ರಸ್ತಾಪ ‌ಮಾಡಿ ಕಿಡಿಕಾರಿದರು.

ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಬಗ್ಗೆ ಹೋರಾಟ ಮಾಡಿದವರು. ಕಾಗೋಡು ತಿಮ್ಮಪ್ಪನವರು ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ. ಸಮಾಜವಾದ ಅಂದರೆ ಎಲ್ಲರಿಗೂ ಸಮಾನವಾದ ಹಕ್ಕು ನೀಡುವುದಾಗಿದೆ ಎಂದು ತಿಳಿಸಿದರು.

ದಲಿತರನ್ನು ಡಿಸಿಎಂ ಮಾಡಬಹುದಿತ್ತು: ಚುನಾವಣೆ ವೇಳೆ ಎಲ್ಲರೂ ಹಿಂದುಳಿದವರ ಬಗ್ಗೆ ಮಾತನಾಡ್ತಾರೆ. ಅಧಿಕಾರ ಸಿಕ್ಕ ಮೇಲೆ ಸಮುದಾಯವನ್ನು ಮರೆಯುತ್ತಾರೆ. ಅಹಂಕಾರ ಮಾಡಿದ್ರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂಬುದು ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ ಎಂದು ಕಿಡಿ ಕಾರಿದರು. ದೀರ್ಘಾವಧಿಗೆ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇತ್ತು. ಆದರೆ ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯ್ತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ