Breaking News

ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತಾರೆ :ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ಬಿಜೆಪಿ – ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ.‌ ಜನರ ಆಶೋತ್ತರಗಳೇನು ಎಂಬ ಬಗ್ಗೆಯೂ ಗೊತ್ತು. ಅವುಗಳನ್ನೆಲ್ಲ ಈಡೇರಿಸುತ್ತಿದ್ದು, ಒಳ್ಳೆಯ ರೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಹಾಗಾಗಿ ಅವರು ಮೈತ್ರಿ ಮಾಡಿಕೊಂಡರೆ ನಾವು ಸ್ವಾಗತಿಸುತ್ತೇವೆ ಎಂದರು.

 

ಬಿಜೆಪಿ-ಜೆಡಿಎಸ್‌ನವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಿರುವ ಭಯದಿಂದ ಮೈತ್ರಿ ಮಾಡಿಕೊಳ್ಳುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರ‍್ಯಾರು ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಮತ್ತು ಯಾರಿಗೆ ಭಯ ಇದೆ ಅಂತಾನೂ ನನಗೆ ಗೊತ್ತಿಲ್ಲ ಎಂದರು. ಬೆಳಗಾವಿ ಲೋಕಸಭೆಯಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅಂತೆ ಕಂತೆಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು. ಹೈಕಮಾಂಡ್ ಮತ್ತು ಬೆಳಗಾವಿ ಜಿಲ್ಲೆಯ ನಾಯಕರಿದ್ದಾರೆ. ಕುಳಿತುಕೊಂಡು ಚರ್ಚೆ ಮಾಡಿ ಬಳಿಕ ಯಾರು ಅಭ್ಯರ್ಥಿ ಆಗಬೇಕೆಂದು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ