Breaking News

ಬಸವ ತತ್ವವೇ ಉಸಿರು: ನಾಗನೂರು ‘ಶ್ರೀಗಳ ನಡೆ ಭಕ್ತರ ಕಡೆ’

Spread the love

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ.

ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಾಗನೂರು ರುದ್ರಾಕ್ಷಿ ಮಠವು ಗಡಿಯಲ್ಲಿ ನೂರಾರು ವರ್ಷಗಳಿಂದ ಅನ್ನ, ಅಕ್ಷರ, ಆಶ್ರಯ ನೀಡುತ್ತಾ ಜನಸಾಮಾನ್ಯರ ಮಠವಾಗಿ ಜನಪ್ರಿಯವಾಗಿದೆ. ಅಲ್ಲದೇ ಗಡಿಯಲ್ಲಿ ಕನ್ನಡವನ್ನೂ ಗಟ್ಟಿಗೊಳಿಸುವ ಕೈಂಕರ್ಯಯವನ್ನು ಮಾಡುತ್ತಿದೆ. ಇನ್ನು ಬಸವತತ್ವವನ್ನೇ ಉಸಿರಾಗಿಸಿಕೊಂಡಿರುವ ಶ್ರೀ ಮಠವು ವಿವಿಧ ಕಾರ್ಯಕ್ರಮಗಳ ಮೂಲಕ ಧರ್ಮಜಾಗೃತಿ ಮಾಡುತ್ತಾ ಬಂದಿದೆ. ಈಗಿನ ಪೀಠಾಧಿಪತಿ ಡಾ‌. ಅಲ್ಲಮಪ್ರಭು ಸ್ವಾಮೀಜಿ ಕೂಡ ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಸ್ವಾಮೀಜಿ ನಡೆ ಭಕ್ತರ ಕಡೆ ಎಂಬ ಘೋಷವಾಕ್ಯದಡಿ ವಿಶ್ವಗುರು ಬಸವೇಶ್ವರ ಭಾವಚಿತ್ರ, ಭಜನಾ ಮಂಡಳಿಯೊಂದಿಗೆ ಓಂ ಶ್ರೀ ಗುರುಬಸವ ಲಿಂಗಾಯನಮಃ ಎನ್ನುವ ಮಂತ್ರಘೋಷದೊಂದಿಗೆ ಭಕ್ತರ ಜೊತೆಗೆ ಡಾ. ಅಲ್ಲಮಪ್ರಭು ಸ್ವಾಮೀಜಿ ಪ್ರತಿನಿತ್ಯ ಒಂದೊಂದು ಗಲ್ಲಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಧರ್ಮ ಜಾಗೃತಿ ಮೂಡಿಸುತ್ತಿದ್ದಾರೆ. ಇನ್ನು ಪಾದಯಾತ್ರೆ ಸಾಗುವ ಮಾರ್ಗದುದ್ದಕ್ಕೂ ಬೀದಿಯನ್ನು ಶುಚಿಗೊಳಿಸಿ, ರಂಗೋಲಿ ಬಿಡಿಸಿ ಸ್ವಾಮೀಜಿ ಅವರ ಮೇಲೆ ಪುಷ್ಪವೃಷ್ಟಿಗೈದು ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸುತ್ತಿದ್ದಾರೆ.

ಜಗಜ್ಯೋತಿ ಬಸವೇಶ್ವರ, ಶಿವಾಜಿ ಮಹಾರಾಜ, ಡಾ. ಬಿ ಆರ್ ಅಂಬೇಡ್ಕರ್, ಪಾರ್ವತಿ-ಪರಮೇಶ್ವರ, ಸಾಯಿ ಬಾಬಾ ಸೇರಿ ತಮ್ಮ ಇಷ್ಟದ ದೇವರ ಭಾವಚಿತ್ರಗಳನ್ನು ತಮ್ಮ ಮನೆ ಮುಂದೆ ಇಟ್ಟು ಭಕ್ತಿಯಿಂದ ನಾಗರಿಕರು ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು ಮುಸ್ಲಿಂ ಬಾಂಧವರು ಕೂಡ ಸ್ವಾಮೀಜಿ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಸ್ವಾಮೀಜಿ ಪಾದಯಾತ್ರೆಯು‌ ಕೋಮು ಸೌಹಾರ್ದತೆಗೆ ಸಾಕ್ಷಿಯಾಯ್ತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ