Breaking News

ಜಿ20 ಔತಣಕೂಟದಲ್ಲಿ ನಿತೀಶ್, ಸ್ಟಾಲಿನ್, ಮಮತಾ ಭಾಗಿ; ಗೆಹ್ಲೋಟ್​, ಕೇಜ್ರಿವಾಲ್ ಗೈರು

Spread the love

ನವದೆಹಲಿ: ಶನಿವಾರ ಜಿ20 ಶೃಂಗಸಭೆಯ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಮುಖ್ಯಮಂತ್ರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

 

 ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಈ ಕಾರ್ಯಕ್ರಮದಲ್ಲಿ ವೃತ್ತಾಕಾರವಾಗಿ ಜೋಡಿಸಿದ ಊಟದ ಟೇಬಲ್​ಗಳಿಗೆ ದೇಶದ ವಿವಿಧ ನದಿಗಳ ಹೆಸರನ್ನು ಇಡಲಾಗಿತ್ತು. ಕೃಷ್ಣ, ಯಮುನಾ, ಬ್ರಹ್ಮಪುತ್ರ ಮತ್ತು ಗಂಗಾ ಹೀಗೆ ನದಿಗಳ ಹೆಸರಿನ ಲೇಬಲ್​ಗಳನ್ನು ಟೇಬಲ್​​ ಮೇಲೆ ಇಡಲಾಗಿತ್ತು.

 ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಔತಣಕೂಟದಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಕೂಡ ಉಪಸ್ಥಿತರಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಊಟ ಮಾಡುತ್ತಿರುವುದು ಚಿತ್ರಗಳಲ್ಲಿ ಕಾಣಿಸುತ್ತದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ