Breaking News

ಪ್ರಜ್ವಲ್​ ರೇವಣ್ಣ ವಿರುದ್ಧದ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ವಕೀಲ ಜಿ.ದೇವರಾಜೇಗೌಡ ಹೇಳಿದ್ದಾರೆ.

Spread the love

ಹಾಸನ: ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗುವವರೆಗೂ ಪಾರ್ಲಿಮೆಂಟ್‌ನಲ್ಲಿ ಪ್ರಜ್ವಲ್ ರೇವಣ್ಣ ಭಾಗವಹಿಸು ಹಾಗಿಲ್ಲ.

ನನ್ನಿಂದ ವಿಚ್ಛೇದನ ಪಡೆದ ಮಹಿಳೆಯನ್ನು ಕರೆದುಕೊಂಡು ಹೇಳಿಕೆ ನೀಡಿರುವವರನ್ನು ರಾಜಕೀಯವಾಗಿ ಮುಗಿಸುವವರೆಗೂ ಆ ಬ್ರಹ್ಮ ಬಂದರೂ ನಾನು ಕಾನೂನು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಕೀಲರಾದ ಜಿ. ದೇವರಾಜೇಗೌಡ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನೀಡಿರುವ ತೀರ್ಪುನ್ನು ಅಮಾನತು ಮಾಡುವಂತೆ ಪ್ರಜ್ವಲ್‌ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದರ ವಿರುದ್ಧ ನಾವು ತಕರಾರು ಸಲ್ಲಿಸಿದ್ದೆವು. ಯಾರೇ ಆಗಲಿ ನ್ಯಾಯಾಲಯವನ್ನು ಗೌರವವಾಗಿ ಕಾಣಬೇಕು. ಸಮಯಕ್ಕೆ ತಕ್ಕಂತೆ ಆ ಕೆಲಸ ಮಾಡಿದರೆ ಬೆಲೆ ಬರುತ್ತದೆ ಎಂದು ನ್ಯಾಯಾಲಯವು ತೀರ್ಪು ಕೊಟ್ಟಿರುವುದೇ ಸಾಕ್ಷಿ. ಪ್ರಜ್ವಲ್‌ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ದಿನವೇ ಅವರು ಅರ್ಜಿ ಹಾಕಬೇಕಿತ್ತು. ಅವರು ಆ ದಿನ ಅರ್ಜಿ ಹಾಕಲಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ನಾಲ್ಕು ದಿನ ತಡವಾಗಿ ಅರ್ಜಿ ಹಾಕಿದರು.

ಎ.ಮಂಜು ಅವರು ಪ್ರಜ್ವಲ್ ರೇವಣ ಸದಸ್ಯತ್ವ ಅನರ್ಹಗೊಳಿಸುವವಂತೆ ಅರ್ಜಿ ಹಾಕಿದ್ದರು. ನ್ಯಾಯಾಲಯವನ್ನು ಹಗುರವಾಗಿ ಕಾಣದಂತೆ ಇವತ್ತು ತೋರಿಸಿಕೊಟ್ಟಿದ್ದು, ಸತ್ಯಕ್ಕೆ ಸಿಕ್ಕ ಜಯ ಎಂದು ಹೇಳುತ್ತೇನೆ. ಅಧಿಕಾರದ ಅಹಂ, ಎಂಬ ಭಾವನೆಯಿಂದ ನ್ಯಾಯಾಲಯವನ್ನು ಕಡೆಗಣಿಸಿದ್ರು ಎನ್ನುವುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ. ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗುವವರೆಗೂ ಪಾರ್ಲಿಮೆಂಟ್‌ನಲ್ಲಿ ಪ್ರಜ್ವಲ್ ಭಾಗಿಯಾಗುವಂತಿಲ್ಲ. ಈಗಾಗಲೇ ಚುನಾವಣಾ ಆಯೋಗ, ಲೋಕಸಭಾ ಸ್ಪೀಕರ್, ವಿಧಾನಸಭೆ ಸ್ಪೀಕರ್​ಗೆ ಎಲ್ಲಾ ದಾಖಲೆ ನೀಡಿ ಪ್ರಕ್ರಿಯೆಗಳನ್ನು ಪೂರ್ತಿ ಮಾಡಿದ್ದೇವೆ. ಸೆ. 18 ಮತ್ತು 19 ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಪ್ರಜ್ವಲ್‌ರೇವಣ್ಣ ಭಾಗವಹಿಸುವಂತಿಲ್ಲ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ