Breaking News

ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧ ಭಾಗಗಳಿಗೆ ಬೆಂಗಳೂರಿನಿಂದ ಕೆಎಸ್‌ಆರ್​​ಟಿಸಿ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

Spread the love

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್‌ಆರ್​​ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ.

ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್‌ಆರ್​​ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ನಂತರ ರಜೆ ಮುಗಿಸಿ ಮರಳಲು ಅನುಕೂಲವಾಗಲು ಪೂರಕವಾಗಿ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ‌.

ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್?: ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್​ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ