Breaking News

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ.

Spread the love

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ..

ತಮಿಳು ಖ್ಯಾತ ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಕಾಂಬೋದಲ್ಲಿ ಮೂಡಿಬಂದ ‘ಜವಾನ್’​ ಸಿನಿಮಾ ಸೆಪ್ಟೆಂಬರ್​ ​ 7, ಗುರುವಾರದಂದು ಬಿಡುಗಡೆಯಾಗಿ ವಿಶ್ವದಾದ್ಯಂತ ಧೂಳೆಬ್ಬಿಸುತ್ತಿದೆ.

ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡ ಚಿತ್ರ ಕಲೆಕ್ಷನ್​ ವಿಚಾರದಲ್ಲಿ ಅಬ್ಬರದ ಓಟ ಮುಂದುವರೆಸಿದೆ. ಶಾರುಖ್​ ಸೇರಿದಂತೆ ನಯನತಾರಾ, ವಿಜಯ್​ ಸೇತುಪತಿ ಅವರಿಗೂ ‘ಜವಾನ್​’ ಉತ್ತಮ ಹೆಸರು ತಂದುಕೊಟ್ಟಿದೆ. ಬಿಡುಗಡೆಯಾದ ಐದೇ ದಿನಗಳಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಜವಾನ್​ ದೇಶೀಯವಾಗಿ ಮತ್ತು ಜಾಗತಿಕವಾಗಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಅವುಗಳು ಹೀಗಿವೆ…

 

 

  • ಕಿಂಗ್​ ಖಾನ್​ ಅವರ ಹೈ ಆಕ್ಷನ್​ ಚಿತ್ರ ‘ಜವಾನ್’​ ಬಿಡುಗಡೆಯಾದ ಮೊದಲ ದಿನ ವಿಶ್ವದಾದ್ಯಂತ 129.6 ಕೋಟಿ ರೂಪಾಯಿ ಮತ್ತು ಭಾರತದಲ್ಲಿ 75 ಕೋಟಿ ರೂಪಾಯಿ ಗಳಿಸಿತು. ಚಿತ್ರ ತಯಾರಕರ ಪ್ರಕಾರ, ಎಸ್​ಆರ್​ಕೆ ವೃತ್ತಿಜೀವನದಲ್ಲಿ ಜಾಗತಿಕವಾಗಿ ಮತ್ತು ಭಾರತದಲ್ಲಿ ಭರ್ಜರಿ ಓಪನಿಂಗ್​ ಪಡೆದ ಮೊದಲ ಹಿಂದಿ ಚಿತ್ರ ಜವಾನ್​ ಆಗಿದೆ.

 

  • ಬಿಡುಗಡೆಯಾದ ಮೂರು ದಿನದಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದ ದಾಖಲೆ ಕೂಡ ‘ಜವಾನ್​’ ಹೆಸರಿನಲ್ಲಿದೆ. ಪಠಾಣ್​ ಈ ಮೊತ್ತವನ್ನು ಗಳಿಸಲು ನಾಲ್ಕು ದಿನ ತೆಗೆದುಕೊಂಡಿದ್ದರೆ, ಗದರ್​ 2 5 ದಿನಗಳಲ್ಲಿ ಸಾಧಿಸಿತು.

 

  • ಜವಾನ್ ಸಿನಿಮಾ ಶನಿವಾರದಂದು ಮತ್ತೊಂದು ದಾಖಲೆಯನ್ನು ಬರೆಯಿತು. ಬಿಡುಗಡೆಯಾಗಿ 3ನೇ ದಿನ ​74 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಇದಕ್ಕೂ ಮೊದಲು ವಾರಾಂತ್ಯವಾದ ಶನಿವಾರದಂದು ಯಾವ ಸಿನಿಮಾವೂ ಇಷ್ಟೊಂದು ಮೊತ್ತ ಗಳಿಸಿಲ್ಲ. ಜವಾನ್​ ಸಿನಿಮಾವೇ ಈ ಹೊಸ ಇತಿಹಾಸವನ್ನು ಸೃಷ್ಟಿಸಿತು.

Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ