Breaking News

ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ : C.M.ಸಿದ್ದರಾಮಯ್ಯ

Spread the love

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು.

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶ್ರೀ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಉಚಿತ ವಿದ್ಯಾರ್ಥಿನಿಲಯದ ಲೋಕಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

 ಬಿಜಿಎಸ್ ಸಾಂಸ್ಕೃತಿಕ ಭವನ ಮತ್ತು ಉಚಿತ ವಿದ್ಯಾರ್ಥಿನಿಲಯದ ಲೋಕಾರ್ಪಣೆ ಮಾಡಿದ ಸಿಎಂನೂತನ ವಿದ್ಯಾರ್ಥಿನಿಲಯದಲ್ಲಿ 200 ಜನ ವಿದ್ಯಾರ್ಥಿಗಳಿಗೆ ಇಲ್ಲಿ ಓದಲು ಅವಕಾಶ ಕಲ್ಪಿಸಲಾಗಿದ್ದು, ಇನ್ನಷ್ಟು ಭಾಗದಲ್ಲಿ ವಿದ್ಯಾರ್ಥಿನಿಲಯಗಳಿವೆ. ವಿದ್ಯೆ ನೀಡುವುದು ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ. ಸಮಾಜದಲ್ಲಿ ಎಲ್ಲರಿಗೂ ಶಿಕ್ಷಣ ದೊರೆತರೆ ಮಾತ್ರ ಜ್ಞಾನ ಬೆಳೆಯಲು, ಎಲ್ಲರೂ ಸ್ವಾಭಿಮಾನದಿಂದ ಬದುಕಲು ಸಾಧ್ಯ. ವಿದ್ಯೆ ಕಲಿಯದೇ ಹೋದರೆ ಯೋಚನಾಪರವಾಗಲು, ಸ್ವಾಭಿಮಾನಿಗಳಾಗಲು, ಜ್ಞಾನಿಗಳಾಗಲು ಸಾಧ್ಯವಿಲ್ಲ. ಆದರೆ, ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ. ವೈಜ್ಞಾನಿಕ, ವೈಚಾರಿಕತೆಯನ್ನು ಬೆಳೆಸುವ ಶಿಕ್ಷಣ ಅಗತ್ಯ ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ