Breaking News

ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠ ಸ್ವಾಮೀಜಿ

Spread the love

ಹುಬ್ಬಳ್ಳಿ: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ರಾಜಕೀಯದಲ್ಲಿ ಏನಾಗುತ್ತದೆ ಎಂದು ಯುಗಾದಿ ನಂತರ ಕಾದು‌ನೋಡಿ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಬರಗಾಲದ ಛಾಯೆ ಬಗ್ಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ, ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನನ್ನ‌ ಕ್ಷಮಿಸುವುದಿಲ್ಲ.

ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ, ಮನುಷ್ಯನ‌ ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿಯನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರವರ ವಿಚಾರ. ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ, ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಎಂದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತು ಮಾತನಾಡಿ, ಇದು ಅವರವರ ಧರ್ಮದವರ ಹೇಳಿಕೆ. ಅದು ಅವರ‌ನೋವಿನ ಸಂಗತಿ. ಎಲ್ಲಾ ಜನಾಂಗದಲ್ಲಿಯೂ ಅವರವರ ನೋವು ಇರುತ್ತೆ.

ಅದನ್ನು ಈ ರೀತಿ ನೋವಿನ‌ ಮೂಲಕ ಹೊರಹಾಕುತ್ತಾರೆ. ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ