Breaking News

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Spread the love

ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು.

ಎಸ್​ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ ಪುಟ್ಟ ಬಾಲಕನಲ್ಲಿ ಕಂಡು ಬಂದಿದೆ. ಕುಟುಂಬಸ್ಥರು ನೆರವು ಕೋರಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಅವರಲ್ಲಿ ಮನವಿ ಮಾಡಿದ್ದರು.

ವಿಷಯ ತಿಳಿದ ಸಿಎಂ ಕೇಜ್ರಿವಾಲ್​ ಅವರು ಕುಟುಂಬದೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದರು. ಗಂಭೀರ ಕಾಯಿಲೆಯಿಂದಾಗಿ ಮಗು ಕೈ- ಕಾಲುಗಳಲ್ಲಿ ಶಕ್ತಿಯನ್ನು ಕಳೆದುಕೊಂಡಿದೆ. 24 ತಿಂಗಳೊಳಗೆ ರೋಗಕ್ಕೆ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯ ಎಂದು ವೈದ್ಯರು ಸೂಚಿಸಿದ್ದರು. ಚಿಕಿತ್ಸೆಗೆ ದೊಡ್ಡ ಮೊತ್ತ ಬೇಕಾಗುವ ಕಾರಣ ಸಾರ್ವಜನಿಕರಲ್ಲಿ ಪೋಷಕರು ಸಹಾಯಕ್ಕಾಗಿ ಮನವಿ ಮಾಡಿದ್ದರು.

₹17.5 ಕೋಟಿ ಚುಚ್ಚುಮದ್ದು: ಕಾಯಿಲೆ ಪೀಡಿತ ಮಗುವಿಗೆ ದೇಶದಲ್ಲಿ ಯಾವುದೇ ಚಿಕಿತ್ಸಾ ಔಷಧ ಇಲ್ಲ. ರೋಗಕ್ಕೆ ನೀಡಲಾಗುವ ಚುಚ್ಚುಮದ್ದು ಅಮೆರಿಕದಿಂದಲೇ ತರಿಸಬೇಕು. ಇದಕ್ಕೆ 17.5 ಕೋಟಿ ರೂಪಾಯಿ ಖರ್ಚಾಗುತ್ತದೆ. ಹೀಗಾಗಿ ಸರ್ಕಾರ ನೆರವು ನೀಡಬೇಕು ಎಂದು ಪೋಷಕರು ಕೋರಿದ್ದರು. ಪಂಜಾಬ್‌ನ ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತು ಸ್ಥಳೀಯ ಶಾಸಕ ಗುಲಾಬ್ ಸಿಂಗ್ ಅವರು ಮಗುವಿನ ಸಹಾಯಕ್ಕೆ ಧಾವಿಸಿದ್ದರು.


Spread the love

About Laxminews 24x7

Check Also

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

Spread the love ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ