Breaking News

ಸಚಿವ ಡಿ ಸುಧಾಕರ್ ವಜಾ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Spread the love

ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದರು.

ಎಫ್​ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಆರೋಪ: ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತೀರಲ್ವಾ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್​​ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದೀರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಮಾಜಿ ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.

ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಪ್​​ಐಆರ್ ದಾಖಲಿಸಿದ ಅಧಿಕಾರಿಗೆ ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ಧವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಭಾಷಣ ಮಾಡಿದ್ರಿ. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

Spread the love ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ