Breaking News

ಮೈಸೂರು ವಿವಿ ಕುಲಪತಿ ಲೋಕನಾಥ್​ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್

Spread the love

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ.

ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರ ಪೀಠ, ಲೋಕನಾಥ್​ ನೇಮಕ ಆದೇಶವನ್ನು ರದ್ದು ಪಡಿಸಿ ಆದೇಶಿಸಿದೆ. ಜೊತೆಗೆ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000 ಮತ್ತು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ-2018ರ ನಿಯಮಗಳ ಅನುಸಾರ ಮೈಸೂರು ವಿವಿ ಕುಲಪತಿ ಹುದ್ದೆಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ನಿರ್ದೇಶಿಸಿದೆ.

ಲೋಕನಾಥ್‌ ಅವರನ್ನು ಮೈಸೂರು ವಿವಿ ಕುಲಪತಿ ಹುದ್ದೆಗೆ ನೇಮಕ ಮಾಡುವ ವೇಳೆ ನಿಯಮಾವಳಿಗಳನ್ನು ಸೂಕ್ತವಾಗಿ ಪಾಲನೆ ಮಾಡಿಲ್ಲ. ಇದರಿಂದ ಅವರ ನೇಮಕಾತಿಯನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರವು ಮೈಸೂರು ವಿವಿ ಕುಲಪತಿ ನೇಮಕ ಪ್ರಕ್ರಿಯೆಯನ್ನು ಹೊಸದಾಗಿ ಮಾಡಬೇಕು. ಅದಕ್ಕಾಗಿ ಹಿಂದಿನ ಶೋಧನಾ ಸಮಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಕುಲಪತಿ ಹುದ್ದೆಗೆ ಅರ್ಹರಾದವರ ಮೂವರು ಹೆಸರು ಸೂಚಿಸಲು ಹೊಸದಾಗಿ ಶೋಧನಾ ಸಮಿತಿಯನ್ನು ರಚನೆ ಮಾಡಬೇಕು. ಲೋಕನಾಥ್‌ ಅವರ ಅರ್ಜಿ ಸೇರಿದಂತೆ ಎಲ್ಲಾ ಅರ್ಹರ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಬೇಕು. ನಂತರ ಅರ್ಹರ ಹೆಸರನ್ನು ರಾಜ್ಯ ಸರ್ಕಾರಕ್ಕೆ ರವಾನಿಸಬೇಕು ಎಂದು ಆದೇಶದಲ್ಲಿ ಆದೇಶದಲ್ಲಿ ವಿವರಿಸಿದೆ.

ಸಮಿತಿಯು ಶಿಫಾರಸು ಮಾಡಿದ ಮೂರು ಅರ್ಹರ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಬಳಿಕ ರಾಜ್ಯಪಾಲರು ಆ ಮೂವರ ಹೆಸರಲ್ಲಿ ಒಬ್ಬರ ಹೆಸರು ಅಂತಿಮಗೊಳಿಸಿ, ರಾಜ್ಯ ಸರ್ಕಾರದಿಂದ ಒಪ್ಪಿಗೆ ಪಡೆದ ನಂತರ ಕುಲಪತಿ ಹುದ್ದೆಗೆ ನೇಮಕ ಮಾಡಬೇಕು. ಒಂದೊಮ್ಮೆ ಎರಡನೇ ಪಟ್ಟಿಯಲ್ಲಿ ಅರ್ಹರ ಹೆಸರು ಅಗತ್ಯವಿದೆ ಎಂದು ರಾಜ್ಯಪಾಲರು ಭಾವಿಸಿದಲ್ಲಿ, ಅದನ್ನು ರಾಜ್ಯ ಸರ್ಕಾರದಿಂದ ಕೋರಬಹುದು. ರಾಜ್ಯಪಾಲರು ಎರಡನೇ ಪಟ್ಟಿಯನ್ನು ಕೋರಿದರೆ ಸರ್ಕಾರವು ಶೋಧನಾ ಸಮಿತಿಯಿಂದ ರಾಜ್ಯ ಸರ್ಕಾರ ಅರ್ಹರ ಹೆಸರುಗಳನ್ನು ಪಡೆಯಬಹುದು. ಆ ಹೆಸರುಗಳನ್ನು ಸೂಚಿಸುವ ವೇಳೆ ಸಮಿತಿಯ ಅದೇ ನಿಯಮಗಳನ್ನು ಪಾಲನೆ ಮಾಡಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಅನಾರೋಗ್ಯದ ನಡುವೆ ಸಿಎಂ, ಆಪ್ತನ ಔತಣಕೂಟಕ್ಕೆ ಆಗಮಿಸಿದ್ದಾರೆ. 

Spread the loveಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ