Breaking News

ಕಸ ಎಸೆಯದಂತೆ ಹೇಳಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Spread the love

ಕಾರವಾರ (ಉತ್ತರಕನ್ನಡ): ಕಸ ಎಸೆಯದಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬ ರಸ್ತೆ ಬದಿ ಕಸ ಹಾಕಲು ಮುಂದಾಗಿದ್ದಾನೆ. ಈ ವೇಳೆ ಕಸ ಹಾಕದಂತೆ ತಡೆದ ಪೌರಕಾರ್ಮಿಕನಿಗೆ ಭಯಂಕರವಾಗಿ ಥಳಿಸಲಾಗಿದೆ. ಚೇತನಕುಮಾರ್ ಕೊರಾರ ಹಲ್ಲೆಗೊಳಗಾದ ಪೌರಕಾರ್ಮಿಕ ಆಗಿದ್ದಾನೆ. ಈ ಸಂಬಂಧ ಪೌರಕಾರ್ಮಿಕರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ಕೂಡಾ ನಡೆಸಿದ್ದಾರೆ.

ಹಲ್ಲೆಗೊಳಗಾದ ಚೇತನ್​ ಕುಮಾರ್​ ಕಾರವಾರ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಸೋಮವಾರ ರಾತ್ರಿ ಚೇತನ್​ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದಾರಿಯಲ್ಲಿ ಹೋಗುವ ವೇಳೆ. ಬಸ್ ನಿಲ್ದಾಣದ ಸಮೀಪ ಯುವಕನೊಬ್ಬ ಕಸವನ್ನ ರಸ್ತೆಗೆ ಎಸೆಯಲು ಮುಂದಾಗಿದ್ದಾನೆ. ಆತನನ್ನು ತಡೆದ ಚೇತನ್ ಕಸ ಎಸೆಯದಂತೆ ಬುದ್ದಿಮಾತು ಹೇಳಿದ್ದ. ಇಷ್ಟಕ್ಕೇ ಕೋಪಗೊಂಡ ಯುವಕ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಚೇತನ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಜಗಳ ಬಿಡಿಸಲು ಬಂದ ಚೇತನ್ ಸಹೋದರ ಪುರುಷೋತ್ತಮ್ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಆತನನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ದೃಶ್ಯಗಳು ಇಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಮೇಲೆ ಪೌರಕಾರ್ಮಿಕರು ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೂ ಮನವಿ ಸಲ್ಲಿಸಿದ್ದಾರೆ.

ಈ ಘಟನೆಯಿಂದಾಗಿ ಪೌರಕಾರ್ಮಿಕರು ಆತಂಕಗೊಂಡಿದ್ದು, ಕೆಲಸಕ್ಕೆ ತೆರಳಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಮನೆ ತಿರುಗಿ ಕಸ ಸಂಗ್ರಹಿಸಿ ನಗರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರ ಮೇಲೆ ವಿನಾಕಾರಣ ಹಲ್ಲೆ ನಡೆಸಿರುವ ಘಟನೆಯಿಂದ ನೋವುಂಟಾಗಿದೆ ಎಂದು ಪೌರ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಆರೋಪಿಗಳನ್ನು ಬಂಧಿಸುವವರೆಗೂ ಹಲ್ಲೆ ನಡೆದ ವಾರ್ಡ್‌ನ ಕಸ ಸಂಗ್ರಹಿಸುವುದಿಲ್ಲ ಎಂದು ಪೌರಕಾರ್ಮಿಕರು ಪಟ್ಟು ಹಿಡಿದಿದ್ದು, ಈ ಸಂಬಂಧ ಪೌರಾಯುಕ್ತರಿಗೆ ಮನವಿ ಕೂಡಾ ಮಾಡಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಪೌರಾಯುಕ್ತರು, ಸಾರ್ವಜನಿಕರ ಕೆಲಸ ಮಾಡುವ ನೌಕರರಿಗೆ ಈ ರೀತಿ ಹಲ್ಲೆ ಮಾಡುವುದು ತಪ್ಪು. ಯಾರೇ ಇಂತಹ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ