Breaking News

ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದೂಡಿಕೆ: ಫೆಬ್ರವರಿಯಲ್ಲಿ ನಡೆಸಲು ಸರ್ಕಾರ ನಿರ್ಧಾರ

Spread the love

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿಜಯನಗರ – ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಮುಂಚೆ ನವೆಂಬರ್​ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ, ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ದಿವಾಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ