Breaking News

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ

Spread the love

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಸೇನೆಯ ಮೇಜರ್, ಕರ್ನಲ್​ ಹಾಗೂ ಡಿಎಸ್​​ಪಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಪೊಲೀಸರು, ಅನಂತ್​ನಾಗ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಕರ್ನಲ್ ಮತ್ತು ಮೇಜರ್ ಹಾಗೂ ಡಿಎಸ್​ಪಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಕಮಾಂಡಿಂಗ್ ರಾಷ್ಟ್ರೀಯ ರೈಫಲ್ಸ್ ಯೂನಿಟ್ ಮತ್ತು ಮೇಜರ್ ಅನಂತ್​ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಆಫ್-ವೆಟ್ 19 ಆರ್‌ಆರ್‌ಗೆ ಕಮಾಂಡರ್ ಆಗಿದ್ದರು ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ