Breaking News

ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದ ನೈರುತ್ಯ ರೈಲ್ವೆ

Spread the love

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ.‌ ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ.

1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ.

ಇದರ ಜೊತೆಗೆ ನ 270 ಆಟೋಮೊಬೈಲ್ ರೇಕ್​ಗಳನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 52.5 ರಷ್ಟು ಹೆಚ್ಚಾಗಿದೆ. ನೈರುತ್ಯ ರೈಲ್ವೆ ಒಂದು ದಿನಕ್ಕೆ ಸರಾಸರಿ 1,991 ವ್ಯಾಗನ್​ಗಳನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 8 ರಷ್ಟು ಹೆಚ್ಚಾಗಿದೆ. ನೈರುತ್ಯ ರೈಲ್ವೆ ಈ ಹಣಕಾಸು ವರ್ಷದ ಆಗಸ್ಟ್ ವರೆಗೆ 19.27 ಮಿಲಿಯನ್ ಟನ್ ಸರಕು ಸಾಗಣೆ ದಾಖಲಿಸಿದೆ. ಇದು ಕಳೆದ ವರ್ಷದ ಲೋಡಿಂಗ್ ಅವಧಿಗೆ ಹೋಲಿಸಿದರೆ ಸುಮಾರು ಶೇ.9.4 ರಷ್ಟು ಹೆಚ್ಚಾಗಿದೆ.

8.27 ಮಿಲಿಯನ್ ಟನ್ ಕಬ್ಬಿಣದ ಅದಿರು, 3.45 ಮಿಲಿಯನ್ ಟನ್ ಉಕ್ಕು, 0.87 ಮಿಲಿಯನ್ ಟನ್ ಖನಿಜ ತೈಲ, 0.49 ಮಿಲಿಯನ್ ಟನ್ ರಸಗೊಬ್ಬರ, 270 ಆಟೋಮೊಬೈಲ್ ರೇಕ್​ಗಳನ್ನು ಲೋಡ್ ಮಾಡುವ ಮೂಲಕ ವಲಯವು 1,909.77 ಕೋಟಿ ರೂ. ಸರಕು ಆದಾಯವನ್ನು ಗಳಿಸಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 13.9ರಷ್ಟು ಹೆಚ್ಚಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ