Breaking News

ವಿಜಯಪುರದಲ್ಲಿ ನಾಟಕ ಪ್ರದರ್ಶನದ ವೇಳೆ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ

Spread the love

ವಿಜಯಪುರ: ನಾಟಕ ಪ್ರದರ್ಶನದ ವೇಳೆ ದಿಢೀರ್​ ಕುಸಿದು ಬಿದ್ದು ಪೋಸ್ಟ್​​ಮ್ಯಾನ್ ಸಾವನ್ನಪ್ಪಿರುವ ಮನಕಲಕುವ ಘಟನೆ ಗುರುವಾರ ರಾತ್ರಿ ನಡೆದಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಶರಣು ಬಾಗಲಕೋಟೆ (24) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ಪೋಸ್ಟ್​​ಮ್ಯಾನ್ ಆಗಿದ್ದಾರೆ.

ನಾಟಕ ಪ್ರದರ್ಶನ ವೇಳೆ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ಕೊಟ್ಯಾಳ್​ಗೆ ಹೃದಯಾಘಾತವಾಗಿದೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. ಕೇವಲ 24 ವರ್ಷದ ಶರಣು ಬಾಗಲಕೋಟೆ ಇತ್ತೀಚೆಗೆ ಪೋಸ್ಟ್​​ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಗ್ರಾಮ ದೇವರ ಜಾತ್ರೆ ಹಿನ್ನೆಲೆ ನಾಟಕ ಹಮ್ಮಿಕೊಂಡಿದ್ದು, ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ ತಾನು ಸಹ ನಾಟಕದಲ್ಲಿ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ವಿಧಿಯಾಟಕ್ಕೆ ಪ್ರಾಣ ಕಳೆದುಕೊಂಡಿದ್ದಾನೆ. ಈ ಸಂಬಂಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಸಹಜ ಸಾವು ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ