Breaking News

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ

Spread the love

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಇಂಡಸ್ಟ್ರೀಯಲ್​ ಡೆವಲ್ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿಗೆ ಮುಂದಾಗಿದೆ.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ..

ಹುದ್ದೆ ವಿವರ: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ಭರ್ತಿ ಮಾಡಲಾಗುವುದು.

ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್​ ಜ್ಞಾನ ಹೊಂದಿರುವುದು ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸುವ ರಾಜ್ಯಗಳ ಪ್ರಾದೇಶಿಕ ಭಾಷೆಗಳ ಮೇಲೆ ಹಿಡಿತ ಹೊಂದಿರಬೇಕಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಠ 20 ವರ್ಷ ಆಗಿದ್ದು, ಗರಿಷ್ಠ 25 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ ಮತ್ತು ಇತರೆ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ವೇತನ ಸೌಲಭ್ಯ 6,14,000ರಿಂದ 6,50,000 ರೂ.ವರೆಗೂ ಇರಲಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೆಪ್ಟೆಂಬರ್​ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ. ಈ ಹುದ್ದೆ ಅಕ್ಟೋಬರ್​ 20ರಂದು ಆನ್​ಲೈನ್​ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ತಾತ್ಕಾಲಿಕ ದಿನಾಂಕ ಘೋಷಣೆ ಮಾಡಲಾಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು idbibank.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ