Breaking News

ಸಂವಿಧಾನ ಪೀಠಿಕೆಯ ಜಾಗತಿಕ ವಾಚನ

Spread the love

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ.

ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. 90ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ. We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯಾತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

 ಸಂವಿಧಾನ ಪೀಠಿಕೆಯ ಜಾಗತಿಕ ವಾಚನಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ ಎಂದು ತಿಳಿಸಿದರು.

ಕಾರ್ಯಕ್ರದಮಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಗೃಹ ಸಚಿವ ಜಿ. ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ