ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೆರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ.
ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ಈ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆ.18 ರಂದು ಈ ಗಣಪ ಪ್ರತಿಷ್ಠಾಪನೆಗೊಳ್ಳಲಿದೆ. ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಹೊಂದಿದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವೂ ಸಹ ಅಮೆರಿಕನ್ ಡೈಮಂಡ್ ಹರಳು, ನವರತ್ನ ಹರಳುಗಳಿಂದ ಗಣೇಶ ಮೂರ್ತಿಯನ್ನು ನಿರ್ಮಿಸಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೆರಿಕನ್ ಡೈಮಂಡ್ ಹರಳುಗಳಿಂದ ಅಲಂಕೃತವಾದ ಗಣೇಶ ಮೂರ್ತಿಯನ್ನ ಹುಬ್ಬಳ್ಳಿಯಲ್ಲಿ ನಿರ್ಮಿಸಿಕೊಂಡು ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗ್ತಾರೆ. ಬಳಿಕ ಈ ಡೈಮಂಡ್ ಗಣಪ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿ 7 ದಿನಗಳವರೆಗೆ ವಿಶೇಷವಾಗಿ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಈ ಮೂಲಕ ಈ ಸಂಘ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುತ್ತೆ.ಪ್ರತಿ ವರ್ಷದಂತೆ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್ ಡೈಮಂಡ್ ಹಾಗೂ ನವರತ್ನ ಹರಳುಗಳಿಂದ ಕೂಡಿದ ಐಶ್ವರ್ಯ ಗಣೇಶ ಮಾದರಿಯಲ್ಲಿ ಗಣೇಶ ಮೂರ್ತಿ ನಿರ್ಮಿಸಿ ಪ್ರತಿಷ್ಠಾಪನೆ ಮಾಲಾಗುತ್ತಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಬೆಂಗಳೂರಿಗೆ ಗಣೇಶನನ್ನು ತೆಗೆದುಕೊಂಡು ಹೋಗಲಾಯಿತು.
Laxmi News 24×7