Breaking News

ಕೇಂದ್ರ ಸರ್ಕಾರದ ಬರ ನಿರ್ವಹಣೆ ಮಾನದಂಡದಿಂದ ಬರಗಾಲ ಘೋಷಣೆ ವಿಳಂಬವಾಗಿದೆ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ.

ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಆರೋಪಕ್ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ ಎಂದಿದ್ದಾರೆ.

ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕ ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ