Breaking News

ಸೆಪ್ಟಂಬರ್​ 18ರಂದು ‘ತೋತಾಪುರಿ 2’ ಚಿತ್ರದ ಟ್ರೈಲರ್​ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಬಿಡುಗಡೆ ಮಾಡಲಿದ್ದಾರೆ.

Spread the love

ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ‘ತೋತಾಪುರಿ’ ಚಿತ್ರ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂದುವರಿದ ಭಾಗ ‘ತೋತಾಪುರಿ 2’ ಶೀಘ್ರದಲ್ಲೇ ತೆರೆಕಾಣಲು ಸಿದ್ಧವಾಗಿದೆ. ‘ಸಿದ್ಲಿಂಗು’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ತೋತಾಪುರಿ 2’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಸಾಥ್ ಸಿಕ್ಕಿದೆ. ಇದೇ ಗಣೇಶ ಹಾಗೂ ಗೌರಿ ಹಬ್ಬಕ್ಕೆ ‘ತೋತಾಪುರಿ 2’ ಚಿತ್ರದ ಟ್ರೈಲರ್​ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಬಿಡುಗಡೆ ಮಾಡಲಿದ್ದಾರೆ.

 

ಈ ಬಗ್ಗೆ ಮಾತನಾಡಿರುವ ನಟ ಜಗ್ಗೇಶ್, ಶಿವಣ್ಣ ಮನಸ್ಸು ಬಹಳ ದೊಡ್ಡದು. ಯಾಕಂದ್ರೆ ನಮ್ಮ ‘ತೋತಾಪುರಿ’ ಸಿನಿಮಾ ನೋಡಿ ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಗಣೇಶ ಹಬ್ಬಕ್ಕೆ ‘ತೋತಾಪುರಿ 2’ ಚಿತ್ರದ ಟ್ರೈಲರ್ ಅನ್ನು ಅವರೇ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ಸಂತೋಷವಾಗುತ್ತಿದೆ. ಸಾಕಷ್ಟು ಫಾರಿನ್ ಸ್ನೇಹಿತರು ಹಾಗೂ ದೊಡ್ಡ ದೊಡ್ಡ ಅಧಿಕಾರದಲ್ಲಿರುವ ಗೆಳೆಯರು ‘ತೋತಾಪುರಿ 2’ ಸಿನಿಮಾ ನೋಡುವುದಕ್ಕೆ ವೇಟ್ ಮಾಡ್ತಾ ಇದ್ದಾರೆ ಎಂದರು.

 

ಮೊದಲ ಭಾಗದಲ್ಲಿ ಕಾಮಿಡಿ ಜೊತೆಗೆ ಜಾತಿ ಧರ್ಮದ ಬಗ್ಗೆ ಹೇಳಲಾಗಿತ್ತು. ಆದರೆ ತೋತಾಪುರಿ 2 ಸಿನಿಮಾದಲ್ಲಿ ಸಮಾನತೆಯ ಬಗ್ಗೆ ಹೇಳಲಾಗಿದೆ. ನೋಡಿದ ಮೇಲೆ ಜಾತಿಯನ್ನು ಮೀರಿ ನಾವೆಲ್ಲ ಒಂದೇ ಎಂಬ ಭಾವನೆ ಮೂಡುತ್ತೆ. ಹಾಗೇ ನನ್ನ ಜೀವನದಲ್ಲಿ ನಡೆದಿರುವ ಘಟನೆಗಳು ತೋತಾಪುರಿ 2 ಚಿತ್ರದಲ್ಲಿ ಇದೆ. ಗಂಭೀರ ವಿಷಯವನ್ನು ಕಾಮಿಡಿ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದ್ದು, ಕನ್ನಡಿಗರ ಮನ ಗೆಲ್ಲೋದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಇನ್ನು, ನಟ ರಾಕ್ಷಸ ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜೊತೆ ಪೂರ್ಣಪ್ರಮಾಣದ ನಾಯಕನಾಗಿ ಅಭಿನಯಿಸಿದ್ದಾರೆ. ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಲುಕ್ ಗುರುಪೂರ್ಣಿಮೆಯ ದಿನ ಬಿಡುಗಡೆಯಾಗಿತ್ತು. ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸದ್ಯದಲ್ಲೇ ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದು, ಚಿತ್ರಕ್ಕೆ ನಿರಂಜನ ಬಾಬು ಅವರ ಕ್ಯಾಮೆರಾವರ್ಕ್, ಅರುಣ್ ಆಂಡ್ರ್ಯೂ ಅವರ ಸಂಗೀತ ಸಂಯೋಜನೆಯಿದೆ.


Spread the love

About Laxminews 24x7

Check Also

ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ

Spread the love ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ