ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರ ಪತನವಾಗುತ್ತದೆ.
ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು ಎಂದು ಯತ್ನಾಳ್ ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ ಕೆ ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಪಕ್ಷದ ಹಿರಿಯರು. ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಬಿ ಕೆ ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ?. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ನಡೆಸಿದ್ದಾರೆ. ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಹರಿಪ್ರಸಾದ್ ಅಸಮಾಧಾನ ಹೊರಹಾಕ್ತಿದಾರೆ. ಹರಿಪ್ರಸಾದ್ ಅವರನ್ನು ಕೇವಲ ಅಸ್ತ್ರವಾಗಿ ಬಳಸಿಕೊಳ್ಳಲಾಗ್ತಿದೆ ಎಂದು ಪರೋಕ್ಷವಾಗಿ ಡಿ ಕೆ ಶಿವಕುಮಾರ್ಗೆ ಕುಟುಕಿದರು.