Breaking News

ನಾನು ನಾನೇ, ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರರು.

ಕೆಲವರು ನನ್ನನ್ನು ಎರಡನೇ ದೇವರಾಜು ಅರಸು ಅಂತಾರೆ. ಅದು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಪಪಡಿಸಿದರು. ಇತ್ತೀಚೆಗೆ ವಿಧಾನ ಪರಿಷತ್ ಬಿ ಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡುತ್ತಾ, ದೇವರಾಜ ಅರಸು ಕಾರಿನಲ್ಲಿ ಕುಳಿತರೆ ನೀವು ದೇವರಾಜ ಅರಸು ಆಗೋದಿಲ್ಲ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ದೇವರಾಜ ಅರಸು ಚಿಂತನೆ ಇರಬೇಕು ಎಂದು ಹೆಸರು ಹೇಳದೆ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.

ನಾನು ಅರಸು ಆಗಲು ಸಾಧ್ಯವಿಲ್ಲ. ಅರಸು, ಇಂದಿರಾಗಾಂಧಿ, ನೆಹರೂ ಎಲ್ಲರೂ ಭಿನ್ನವಾಗಿದ್ದರು. ಆದರೆ, ಇವರೆಲ್ಲರ ಸಾಮಾಜಿಕ ಕೊಡುಗೆಗಳು ಅಪಾರ. ಯಾರ ಕೊಡುಗೆಗಳನ್ನೂ ಅಲ್ಲಗಳೆಯಲಾಗದು. ಒಬ್ಬರು ಇನ್ನೊಬ್ಬರಾಗಲು ಸಾಧ್ಯವಿಲ್ಲ. ಹಾಗೆಯೇ ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ನಾವು ರೂಪಿಸುವ ಕಾಳಜಿ ಮತ್ತು ಕಾರ್ಯಕ್ರಮಗಳಲ್ಲಿ ಸಾಮಾಜಿಕ ನ್ಯಾಯ ಇರುತ್ತದೆ. ಎಲ್ಲಾ ಹಿಂದುಳಿದ ಜಾತಿ, ಸಮುದಾಯಗಳು ಸಮಾನ ಅವಕಾಶಗಳನ್ನು ಪಡೆದುಕೊಂಡು ಮುಂದುವರೆದಾಗ ಮಾತ್ರ ಇಡೀ ಸಮಾಜ ಮುಂದುವರೆಯುತ್ತದೆ. ಕೆಲವೇ ಜಾತಿ-ಸಮುದಾಯಗಳು ಅವಕಾಶಗಳನ್ನು ಪಡೆದುಕೊಂಡು ಉಳಿದವುಗಳು ಅವಕಾಶ ವಂಚಿತರಾಗುತ್ತಿದ್ದರೆ ಅದನ್ನು ಪ್ರಗತಿ ಪಥದಲ್ಲಿರುವ ಸಮಾಜ ಎಂದು ಕರೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಬಿಂಬಾರಾಯ್ಕರ್, ರಘು ಆಚಾರ್ಯ ಸೇರಿ ವಿಶ್ವಕರ್ಮ ಸಮುದಾಯದ ಹಲವರಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರವನ್ನು ಒದಗಿಸಿಕೊಟ್ಟಿದೆ. ರಘು ಆಚಾರ್ಯ ದುಡುಕಿ ನಮ್ಮನ್ನೆಲ್ಲಾ ಬಿಟ್ಟು ಕಾಂಗ್ರೆಸ್ ತೊರೆದರು. ನಾನು ಎಷ್ಟು ಹೇಳಿದರೂ ಕೇಳಲಿಲ್ಲ. ಕಾಂಗ್ರೆಸ್ ಪ್ರತಿಯೊಂದು ಜಾತಿ, ಸಮುದಾಯಗಳಿಗೂ ಅವಕಾಶ ಮತ್ತು ಅಧಿಕಾರವನ್ನು ನಿರಂತರವಾಗಿ ಒದಗಿಸುತ್ತಲೇ ಬಂದಿದೆ. ಆ ಮೂಲಕ ಹಿಂದುಳಿದ ಸಮುದಾಯಗಳಿಗೆ, ದಲಿತ ಸಮುದಾಯಗಳಿಗೂ ಶಕ್ತಿ ತುಂಬುತ್ತಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಂಟ್ರಾಕ್ಟ್ ಕೆಲಸಗಳಿಗೆ ಮೀಸಲಾತಿ ಒದಗಿಸಿದ್ದು ನಾವೆ ತಾನೇ ಎಂದು ನೆನಪಿಸಿದ ಮುಖ್ಯಮಂತ್ರಿಗಳು ನನಗೆ ಅಧಿಕಾರ ಎನ್ನುವುದು ಸಾಮಾಜಿಕ ನ್ಯಾಯವನ್ನು ಆಚರಿಸುವ, ಪಾಲಿಸುವ ಒಂದು ಸಾಧನ ಎಂದು ವಿವರಿಸಿದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ